ವಿಭಾಗೀಯ ಮಟ್ಟಕ್ಕೆ ಖೋ ಖೋ ತಂಡ

22 HANUR 8
Published on

ಹನೂರು: ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಪ್ರೌಢಶಾಲೆಯ ಬಾಲಕಿಯರ ತಂಡ ಖೋ,ಖೋ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದೆ.

ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶಾಂತಮಕಲ್ಲಿಕಾರ್ಜುನ ಸ್ವಾಮೀಜಿ ಅವರು ವಿಜಯವಾಣಿಯೊಂದಿಗೆ ಮಾತನಾಡಿ, ಗುಡ್ಡಗಾಡು ಪ್ರದೇಶದಿಂದ ಕೂಡಿರುವ ಮ.ಬೆಟ್ಟದ ತಪ್ಪಲಿನ ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿದ್ದು, ಕ್ರೀಡೆಯಲ್ಲಿ ಇನ್ನಿಲ್ಲದ ಆಸಕ್ತಿಯನ್ನು ಹೊಂದಿದ್ದಾರೆ. ಹಾಗಾಗಿ ಶ್ರೀ ಮಠದ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜತೆಗೆ ಕ್ರೀಡೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಹಲವು ವರ್ಷಗಳಿಂದ ಸಂಸ್ಥೆಯ ಮಕ್ಕಳು ಕ್ರೀಡೆಯಲ್ಲಿ ಸಾಧನೆಗೈಯ್ಯುತ್ತಿರುವುದು ಮೆಚ್ಚುಗೆಯ ಸಂಗತಿ ಎಂದರು.

ಈ ವರ್ಷ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಬಡ್ಡಿ, ಬಾಲ್ ಬ್ಯಾಂಡ್ಮಿಂಟನ್ ಹಾಗೂ ಖೋ, ಖೋದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದ ವಿದ್ಯಾರ್ಥಿಗಳ ತಂಡದಲ್ಲಿ ಖೋ, ಖೋ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂಸ್ಥೆಯು ಮಕ್ಕಳ ಕ್ರೀಡಾ ಸ್ಫೂರ್ತಿಗೆ ಉತ್ತೇಜನ ನೀಡುತ್ತಿರುವುದಕ್ಕೆ ಸಾಕ್ಷಿಯಾಗಿದೆ. ವಿಭಾಗೀಯ ಮಟ್ಟದಲ್ಲೂ ಮಕ್ಕಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲೂ ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು.

-------------

ಫೋಟೋ

22 ಹನೂರು 8 ಚಾಮರಾಜನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಖೋ, ಖೋ ಪಂದ್ಯದಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net