

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನ.5ರಂದು ನಡೆದ ಪ್ರಾಥಮಿಕ ಶಾಲಾ ಮಕ್ಕಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ತನು ಪ್ರಥಮ ಸ್ಥಾನವನ್ನು ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.