ವಿಮಾನ ನಿಲ್ದಾಣ ಕಾಮಗಾರಿ ಸಂಪೂರ್ಣ ಮಾಹಿತಿ ನೀಡಲು ಸಂಸದರು ಸೂಚನೆ

ವಿಮಾನ ನಿಲ್ದಾಣ ಕಾಮಗಾರಿ ಸಂಪೂರ್ಣ ಮಾಹಿತಿ ನೀಡಲು ಸಂಸದರು ಸೂಚನೆ
Published on

ಹಾಸನ:ವಿಮಾನ ನಿಲ್ದಾಣ ಕಾಮಗಾರಿಗೆ ಸಂಬಂದಿಸಿದಂತೆ ಸ್ಥಿತಿಗತಿ ಅರಿಯಲು ಸಂಪೂರ್ಣವಾದ ಮಾಹಿತಿ ನೀಡುವಂತೆ ಸಂಸದ ಶ್ರೇಯಸ್ ಪಟೇಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೆ ಯೋಜನೆ, ವಿಮಾನ ನಿಲ್ದಾಣ ಯೋಜನೆ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿಷಯವಾರು ಪಟ್ಟಿ ತಯಾರಿಸಿ, ಹಣ ಎಷ್ಟು ಬೇಕು ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗೌಡಗೆರೆ ಮತ್ತು ಅದ್ದಿಹಳ್ಳಿ ಕ್ರಾಸ್ ಬಳಿ ಪ್ಲೆ ಓವರ್ ಕ್ರಮವಹಿಸುವಂತೆ ತಿಳಿಸಿದರು. ರೈಲ್ವೆ ಯೋಜನೆಗಳಿಗೆ ಸಂಬಂದಿಸಿದಂತೆ ಭೂಸ್ವಾಧೀನಕ್ಕೆ ಅಧಿಕಾರಿಗಳು ಕ್ರಮವಹಿಸಲು ಸೂಚಿಸಿದರು. ರೈಲ್ವೆ ನಿಲ್ದಾಣಗಳ ನಿರ್ವಹಣೆ ಕುರಿತಂತೆ ಮಾಹಿತಿ ನೀಡಲು ರೈಲ್ವೆ ಇಲಾಖೆ ಅಧಿಕಾರಿಗಳನ್ನು ಮುಂದಿನ ಸಭೆಗೆ ಆಹ್ವಾನಿಸುವಂತೆ ತಿಳಿಸಿದರು.
ಸೌಎಯಲ್ಲಿ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ಉಪ ವಿಭಾಗಾಧಿಕಾರಿ ಶೃತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net