ವಿಮಾನ ನಿಲ್ದಾಣ ಕಾಮಗಾರಿಯ ಸಭೆ

IMG-20201029-WA0037
Published on

ವಿಜಯಪುರ: ವಿಜಯಪುರ ತಾಲೂಕಿನ ಮದಭಾವಿ ಹಾಗೂ ಬುರಣಾಪುರ ವ್ಯಾಪ್ತಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ವಿಮಾನ ನಿಲ್ದಾಣಕ್ಕೆ ಸಮೀಪಿಸುವ ಕಾಲುವೆ ಪಕ್ಕದ ಸಂಪರ್ಕ ರಸ್ತೆ, ನೀರು ಸರಬರಾಜು ಸೌಲಭ್ಯ ಹಾಗೂ 1000 ಕೆವಿ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಸಂಬಂಧಪಟ್ಟಂತೆ ತಕ್ಷಣ ಖರ್ಚು ವೆಚ್ಚ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ವಿಮಾನ ನಿಲ್ದಾಣ ಕಾಮಗಾರಿಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಅಪ್ರೋಚ್ ರೋಡ್ ಕುರಿತು ತಕ್ಷಣ ಭೂಸ್ವಾಧೀನ, ರಸ್ತೆ ಖರ್ಚು ವೆಚ್ಚ ಕುರಿತಂತೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಸೂಚನೆ ನೀಡಿದರು. ಸಭೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಸಂಭಂದಿಸಿದ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net