ವಿಮಾನ ನಿಲ್ದಾಣ ನಿರ್ಮಿಸಿ ಗುರುರಾಯರ ಹೆಸರಿಡಿ

25LNG01
Published on

ಲಿಂಗಸುಗೂರು: ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸಿ ಅದಕ್ಕೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಹೆಸರು ಇಡಬೇಕೆಂದು ಒತ್ತಾಯಿಸಿ ಎಸಿ ಬಸವಣೆಪ್ಪ ಕಲಶೆಟ್ಟಿಗೆ ಕರ್ನಾಟಕ ರಾಷ್ಟ್ರ ಸಮಿತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಕರ್ನಾಟಕ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಕೇರಳ ಸೇರಿದಂತೆ ದೇಶ- ವಿದೇಶದಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇದರಿಂದಾಗಿ ರಾಯಚೂರಿನಲ್ಲಿ ವಿಮಾನ ನಿಲ್ದಾಣದ ಅವಶ್ಯ ಇದೆ. 1957 ರಲ್ಲಿ ಪ್ರಧಾನಿ ಜವಾಹರಲಾಲ್ ನೆಹರು ಪ್ರಯಾಣಿಸುತ್ತಿದ್ದ ವಿಮಾನದ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಪೈಲಟ್ ರಾಯಚೂರಿನಲ್ಲಿ ವಿಮಾನದ ತುರ್ತು ಲ್ಯಾಂಡಿಂಗ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೈಲಟ್‌ಗೆ ಅಶೋಕ ಚಕ್ರ ಪುರಸ್ಕಾರ ನೀಡಲಾಗಿತ್ತು. ಐತಿಹಾಸಿಕ ಹಿನ್ನೆಲೆ ಇರುವ ರಾಯಚೂರಿನಲ್ಲಿ ಜಿಲ್ಲೆಯ ಜನರ ಆಶಯದಂತೆ ಶೀಘ್ರ ವಿಮಾನ ನಿಲ್ದಾಣ ನಿರ್ಮಿಸಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಹೆಸರು ನಾಮಕರಣ ಮಾಡಬೇಕೆಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net