ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರರ ಹೆಸರಿಡಲು ಆಗ್ರಹ

h9-lingayat
Published on

ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣವೆಂದು ನಾಮಕರಣ ಮಾಡಬೇಕು ಎಂದು ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಡಾ. ಶರಣಪ್ಪ ಕೊಟಗಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಗುಲಾಬಿ ವನದಲ್ಲಿದ್ದ ಶ್ರೀ ಜಗಜ್ಯೋತಿ ಬಸವಣ್ಣನವರ ಮೂರ್ತಿಯನ್ನು ತೆರವುಗೊಳಿಸಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದ ಗೇಟ್ ಬಳಿ ಸ್ಥಾಪಿಸಬೇಕು. ಅಲ್ಲದೇ ಗುಲಾಬಿ ವನದಲ್ಲಿ ಅತೀ ವಿಸ್ತಾರವಾದ ಬಸವಣ್ಣನವರ ಮೂರ್ತಿಯನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನಮ್ಮ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕೆಂದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕೇಂದ್ರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಲಾಗುವುದು ಎಂದರು.

ಮುಖಂಡರಾದ ಸತೀಶ ಮೆಹರವಾಡೆ, ಗಂಗಾಧರ ದೊಡ್ಡವಾಡ, ಪಾರಸಮೈಲ್ ಜೈನ್, ಮಹೇಶ ದಾಬಡೆ, ಮೋಹನ ಹೊಸಮನಿ ಸೇರಿದಂತೆ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net