ವಿಮಾನ ನಿಲ್ದಾಣದಲ್ಲಿ 20.89 ಲಕ್ಷ ರೂ.ಮೌಲ್ಯದ ಚಿನ್ನ ಅಕ್ರಮ ಸಾಗಾಟ ಪತ್ತೆ

IMG-20210702-WA0003
Published on

ಮಂಗಳೂರು: ಮಂಗಳೂರು ಅಂ.ರಾ. ವಿಮಾನ ನಿಲ್ದಾಣದಲ್ಲಿ 20,89,800 ರೂ. ಮೌಲ್ಯದ 430 ಗ್ರಾಂ ಅಕ್ರಮ ಚಿನ್ನ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಪತ್ತೆ ಮಾಡಿದ್ದಾರೆ.
ಕಾಸರಗೋಡು ನಿವಾಸಿ ದುಬಾಯಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಈತ ಚಿನ್ನದ ಪೌಡರನ್ನು ಗಮ್ ಬೆರೆಸಿ ಗುದನಾಳದೊಳಗಿಟ್ಟು ಸಾಗಾಟ ಮಾಡಿದ್ದ. ಚಿನ್ನ ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net