

ವಿರಾಜಪೇಟೆ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ವಿವಿಧ ಪಕ್ಷದಿಂದ 9 ಅಭ್ಯರ್ಥಿಗಳ ನಾಮಪತ್ರ ಅಂಗಿಕಾರಗೊಂಡಿದ್ದು, ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ನಾಮಪತ್ರ ಹಿಂಪಡೆಯಲು ಅಂತಿಮ ದಿನವಾದ ಸೋಮವಾರ ಯಾರೂ ನಾಮಪತ್ರ ಹಿಂಪಡೆಯಲಿಲ್ಲ. ಒಟ್ಟು 10 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಪಕ್ಷೇತರ ಅಭ್ಯರ್ಥಿ ಎಚ್.ಪಿ.ಸರೋಜ ಎಂಬುವರ ನಾಮಪತ್ರ ತಾಂತ್ರಿಕ ಕಾರಣಗಳಿಂದ ತಿರಸ್ಕೃತಗೊಂಡಿತ್ತು.
ಬಿಜೆಪಿಯಿಂದ ಹಾಲಿ ಶಾಸಕ ಕೆ.ಜಿ.ಬೋಪಯ್ಯ, ಕಾಂಗ್ರೆಸ್‌ನಿಂದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಜೆಡಿಎಸ್‌ನಿಂದ ಮನ್ಸೂರ್ ಅಲಿ ಖಾನ್, ಆಮ್‌ಆದ್ಮಿ ಪಕ್ಷದಿಂದ ಸಿ.ಎಸ್.ರವೀಂದ್ರ, ಸರ್ವೋದಯ ಕರ್ನಾಟಕ ಪಕ್ಷದಿಂದ ಕಾಡ್ಯಮಾಡ ಮನು, ನ್ಯಾಷಲಿಸ್ಟ್ ಕಾಂಗ್ರೆಸ್ ಪಕ್ಷದಿಂದ ಮಸೂದ್ ಫೌಜ್ಧಾರ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸಜು ವಿ.ಎ., ಪಕ್ಷೇತರರಾಗಿ ಎಂ.ಎ.ನಾಸಿರ್ ಅವರ ನಾಮಪತ್ರ ಅಂಗೀಕಾರವಾಗಿದೆ ಎಂದು ಚುನಾವಣಾಧಿಕಾರಿ ಶಬಾನ ಶೇಕ್ ವಿಜಯವಾಣಿಗೆ ತಿಳಿಸಿದ್ದಾರೆ.