ವಿರಾಟಪುರ ವಿರಾಗಿ ಚಿತ್ರದ ವಿಶೇಷ ಪ್ರದರ್ಶನ

IMG-20230113-WA0047.jpg
Published on

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾ ಸಂಸ್ಥಾಪಕರಾದ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಜೀವನಾಧಾರಿತ ‘ವಿರಾಟಪುರ ವಿರಾಗಿ’ ಚಲನಚಿತ್ರದ ವಿಶೇಷ ಪ್ರದರ್ಶನ ಇಲ್ಲಿನ ಎಸ್‌ಎಸ್ ಮೂವಿ ಟೈಮ್‌ನಲ್ಲಿ ಶುಕ್ರವಾರ ನಡೆಯಿತು.

ವೀರಶೈವ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷರಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಎಸ್.ಎಸ್.ಗಣೇಶ್, ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ಹಾಗೂ ಮಹಾಸಭಾ ಪದಾಧಿಕಾರಿಗಳು, ಆಸಕ್ತರು ಚಿತ್ರ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಹಾನಗಲ್ಲ ಕುಮಾರಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅಥಣಿ ವೀರಣ್ಣ, ನಿರ್ದೇಶಕ ಬಿ.ಎಸ್. ಲಿಂಗದೇವರು ನಿರ್ದೇಶನದಲ್ಲಿ ಸಿನಿಮಾ ಅತ್ಯದ್ಭುತವಾಗಿ ಮೂಡಿಬಂದಿದೆ. ಎಷ್ಟು ಬಾರಿ ನೋಡಿದರೂ ಮತ್ತೆ ನೋಡಬೇಕೆನ್ನಿಸುತ್ತದೆ. ಚಿತ್ರವನ್ನು ವೀಕ್ಷಿಸಿದಾಗ ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಎಂಬ ಭಾವನೆ ಮೂಡಲಿದೆ. ಇದು ಪ್ರತಿಯೊಬ್ಬರೂ ನೋಡಬೇಕಾದ ಚಿತ್ರವಾಗಿದೆ ಎಂದು ಹೇಳಿದರು.

ಜಿಲ್ಲಾ ಕಾರ್ಯದರ್ಶಿ ಬಿ.ಜೆ. ರಮೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶುಭಾ ಐನಳ್ಳಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಮಿತಿ ಅಧ್ಯಕ್ಷ ಐಗೂರು ಚಂದ್ರಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕರೇಶಿವಪ್ಳರ ಸಿದ್ದೇಶ್, ಅಜ್ಜಂಪುರ ವಿಜಯಕುಮಾರ್, ಮಹಾಸಭಾ ಚಿತ್ರದುರ್ಗ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ಪುಷ್ಪಾ ವಾಲಿ, ಶಶಿಕಲಾ ಮೂರ್ತಿ, ಸೌಮ್ಯ ಸತೀಶ್, ಕರೇಶಿವಪ್ಳರ ಸಿದ್ದೇಶ್, ಶಿವಕುಮಾರ್, ಸುಷ್ಮಾ ಪಾಟೀಲ್, ಗೀತಾ ಚಂದ್ರಶೇಖರ್, ನಿರ್ಮಲಾ ಸುಭಾಷ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net