ವಿವಿಧ 8 ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Adarsha Shakshaka Prashasti Application
Published on

ಬೆಳಗಾವಿ: ಪ್ರಸಕ್ತ ಸಾಲಿನ (2023-24)ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಲಭ್ಯಯಿರುವ 8 ವಿವಿಧ ಯೋಜನೆಗಳಿಗೆ ಸೇವಾಸಿಂಧು ತಂತ್ರಾಂಶದಡಿ (ಪೋರ್ಟಲ್) ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ಯೋಜನೆಗಳು: ಮೆರಿಟ್ ವಿದ್ಯಾಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರಯೋಜನೆ, ಪುನರ್ವಸತಿ ಕಾರ್ಯಕರ್ತರ ಮರಣ ಪರಿಹಾರ ನಿಧಿ, ಸಾಧನೆಯೋಜನೆ, ಪ್ರತಿಭೆಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ ವಿವಿಧ ಯೋಜನೆಗಳಿ ಅರ್ಜಿ ಆಹ್ವಾನಿಸಲಾಗಿದೆ. ಬೆಳಗಾವಿ ಜಿಲ್ಲೆಯ ವಿಕಲಚೇತನ ವ್ಯಕ್ತಿಗಳು https://shevashindu.karnataka.gov.in ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಸೆ.30, 2023ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಅರ್ಜಿ ಸಲ್ಲಿಸಿದ ಅಸಲು ಪ್ರತಿಯೊಂದಿಗೆ ದ್ವಿ ಪ್ರತಿಯಲ್ಲಿ ಅರ್ಜಿಯನ್ನು ಆಯಾ ತಾಲೂಕು ಪಂಚಾಯತಿ ಕಚೇರಿಯಲ್ಲಿರುವ ಎಂ.ಆರ್.ಡಬ್ಲ್ಯೂಗಳಿಗೆ ಸಲ್ಲಿಸಬಹುದು ಎಂದು ಜಿಲ್ಲಾ ್ಲಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net