

ಬಾಗಲಕೋಟೆ: ಹುಗುಂದ ಮತ್ತು ಇಲಕಲ್ಲ ತಾಲೂಕಾ ವ್ಯಾಪ್ತಿಯಲ್ಲಿ ಬರುವ ಜಾಕ್‍ವೆಲ್, ಅಂಗನವಾಡಿ ಕಟ್ಟಡ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಪರಿಶೀಲನೆ ನಡೆಸಿದರು.
ಸೋಮವಾರ ನವಲಿ ಜಾಕ್‍ವೆನ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಕೋಡಿಹಾಳ ನೀರಿನ ಸಂರಕ್ಷಣಾ ಘಟಕದ ಕಾಮಗಾರಿ ಸ್ಥಳ ಪರಿಶೀಲಿಸಿದರು. ಬಲಕುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಫ್.ಎಸ್.ಟಿ.ಪಿ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಗೋನಾಳ ಎಸ್.ಬಿ.ಅಂಗನವಾಡಿ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸೂಚಿಸಿದರು.
ಭೇಟಿ ಸಮಯದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಕಾರ್ಯನಿರ್ವಾಹಕ ಅಭಿಯಂತರ ಆಕಾಶ, ಹುನಗುಂದ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಡಿ.ನಾಯ್ಕ ಸೇರಿದಂತೆ ಇತರರು ಉಪಸ್ಥಿತರಿದ್ದರು.