ವಿವಿಧ ಕಾಮಗಾರಿಗಳ ಪರಿಶೀಲಿಸಿದ ಜಿಪಂ ಸಿಇಒ ರಿಷಿ ಆನಂದ

mm 4-8
Published on

ವಿಜಯಪುರ:ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮ ಪಂಚಾಯಿತಿ ಹಾಗೂ ಮನಗೂಳಿ ಪಟ್ಟಣ ವ್ಯಾಪ್ತಿಯ ವಿವಿಧೆಡೆ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಸೋಮವಾರ ಜಿಪಂ ಸಿಇಒ ರಿಷಿ ಆನಂದ ಭೇಟಿ ನೀಡಿ ಪರಿಶೀಲಿದರು.

ನಿಡಗುಂದಿ ತಾಲೂಕಿನ ಇಟಗಿ ಗ್ರಾಪಂ ಬ್ಯಾಲ್ಯಾಳ ಗ್ರಾಮಕ್ಕೆ ಭೇಟಿ ಸಾರ್ವಜನಿಕರೊಂದಿಗೆ ಮಾತನಾಡಿ, ಮನೆ ಹಾಗೂ ಮನೆಯ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಶುದ್ಧೀಕರಿಸಿದ ನೀರನ್ನು ಸೇವಿಸಬೇಕೆಂದು ನೀಡಿದರು.ಪಿಡಿಒಗಳು ಗ್ರಾಮದಲ್ಲಿ ಮನೆಗಳಿಗೆ ನೀರು ಪೂರೈಸುವ ಮುನ್ನ ಓವರ್​ಹೆಡ್​ ಟ್ಯಾಂಕ್​ ಸ್ವಚ್ಛಗೊಳಿಸಿ, ಕ್ಲೋರಿನೇಷನ್​ ಮಾಡಬೇಕು. ನೀರಿನ ಗುಣಮಟ್ಟ ಪರೀಸಿ ನೀರು ಪೂರೈಸಬೇಕು.

ಒಂದು ವೇಳೆ ಅಧಿಕಾರಿಗಳ ರ್ನಿಲಕ್ಷ ಕಂಡು ಬಂದರೆ ಅಂತವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು. ಗ್ರಾಮದ ಶುದ್ಧ ಕುಡಿವ ನೀರಿನ ಟಕಕ್ಕೆ ಭೇಟಿ ನೀಡಿ, ಟಕ ಸರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲು ಸೂಚಿಸಿದರು.

ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ತೆರಳಿ ಆಹಾರದ ಗುಣಮಟ್ಟ, ಸುತ್ತಲಿನ ಪರಿಸರ, ಅಡುಗೆ ಕೋಣೆ ಸ್ವಚ್ಛತೆ, ಸಿಬ್ಬಂದಿ ಹಾಗೂ ಮಕ್ಕಳ ಹಾಜರಾತಿ, ಮಕ್ಕಳ ಆರೋಗ್ಯ ತಪಾಸಣೆ ವರದಿ ಮಾಹಿತಿ ದಾಖಲೆ ಪರಿಶೀಲಿಸಿದರಲ್ಲದೆ, ಮಕ್ಕಳ ಕಲಿಕಾ ಸಾಮರ್ಥ್ಯ ಗುಣಮಟ್ಟ ಹೆಚ್ಚಳವಾಗುವಂತೆ ಕಲಿಕೆಗೆ ಆದ್ಯತೆ ನೀಡಬೇಕು. ಅಲ್ಲದೆ, ಕುಡಿಯುವ ನೀರು, ವಿದ್ಯುತ್​, ಶೌಚಗೃಹ ವ್ಯವಸ್ಥೆ ಸೇರಿ ಅಗತ್ಯ ಸೌಲಭ್ಯ ಒದಗಿಸಬೇಕು. ಮಕ್ಕಳಿಗೆ ಸಮಯಾನುಸಾರ ಪೌಷ್ಟಿಕ ಆಹಾರ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ತಾಕೀತು ಮಾಡಿದರು.

ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಪಂ ವ್ಯಾಪ್ತಿಯ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮೂಲ ಸೌಕರ್ಯ ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ನಿತ್ಯ ಶುದ್ಧ ಕುಡಿಯುವ ನೀರು ಒದಗಿಸಬೇಕು. ಶಾಲೆ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಮಕ್ಕಳ ಕಲಿಕೆಗೆ ಸಹಜವಾಗುವಂತೆ ಪಾಠ ಬೋಧಿಸಬೇಕು ಎಂದರು.

ಸದರಿ ಶಾಲೆಯಲ್ಲಿ 8ನೇ ತರಗತಿಯವರೆಗೆ ಮಾತ್ರ ವಿದ್ಯಾಭ್ಯಾಸಕ್ಕೆ ಅವಕಾಶವಿದ್ದು, 9ನೇ ತರಗತಿಯವರೆಗೆ ಮುಂದುವರಿಸುವ ಅಭಿಪ್ರಾಯವನ್ನು ಉಕ್ಕಲಿ ಗ್ರಾಮಸ್ಥರು, ಶಾಲಾ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಸಿಇಒ ರಿಷಿ ಆನಂದ, 9ನೇ ತರಗತಿ ಮುಂದುವರಿಸುವ ನಿಟ್ಟಿನಲ್ಲಿ ಶಾಲಾ ಕೊಠಡಿ ಪರಿಶೀಲಿಸಿ ತಾಲೂಕಿನ ೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಾಲೆ ಮುಖ್ಯಶಿಕ್ಷಕರಿಗೆ 9ನೇ ತರಗತಿ ಪ್ರಾರಂಭಿಸಲು ಸೂಕ್ತ ಅವಕಾಶ ಕಲ್ಪಿಸಬೇಕೆಂದು ಸೂಚಿಸಿದರಲ್ಲದೆ, ಮಕ್ಕಳೊಂದಿಗೆ ಸಂವಾದ ನಡೆಸಿದರು.

ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ನಿತ್ಯ ಸಮಯ ಪಾಲನೆ ಮಾಡಬೇಕು. ಕಡ್ಡಾಯವಾಗಿ ಹಾಜರಾತಿ ನಿರ್ವಹಿಸಬೇಕು. ವಿದ್ಯಾರ್ಥಿಗಳ ಹಾಜರಾತಿಯೂ ಕಡಿಮೆ ಆಗದಂತೆ ಕ್ರಮವಹಿಸಬೇಕು. ನಿತ್ಯ ಮಕ್ಕಳನ್ನು ಶಾಲೆ ಕಳುಹಿಸಲು ಪಾಲಕರಿಗೆ ತಿಳಿಹೇಳಬೇಕು. ಶಾಲೆಯ ಎಲ್ಲ ಕೊಠಡಿಗಳು, ಒಳಾಂಗಣ ಹಾಗೂ ಹೊರಾಂಗಣ, ಬಿಸಿಯೂಟದ ಅಡುಗೆ ಕೋಣೆಯಲ್ಲಿ ಸ್ವಚ್ಛತೆ ಕಾಪಾಡಬೇಕು. ಮಕ್ಕಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಪ್ರಗತಿ ಹಂತದ ಹೈಟೆಕ್​ ಶೌಚಗೃಹ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ಆದ್ಯತೆ ಮೇರೆಗೆ ಮುಕ್ತಾಯಗೊಳಿಸಲು ಪಿಡಿಒಗಳಿಗೆ ತಿಳಿಸಿದರು.

ಮನಗೂಳಿ ಪಟ್ಟಣದಲ್ಲಿರುವ ಡಿ. ದೇವರಾಜ ಅರಸು ಮೆಟ್ರಿಕ್​ ನಂತರ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ಸಿಇಒ, ಪ್ರತಿ ದಿನ ಎಲ್ಲ ಅಡುಗೆ ಕೊಠಡಿ, ಭೋಜನಾಲಯ, ದಾಸ್ತಾನು ಕೊಠಡಿ, ನಿಲಯದ ಶೌಚಗೃಹ, ಸ್ನಾನದ ಗೃಹ, ಕುಡಿಯುವ ನೀರಿನ ಟಕಗಳನ್ನು ಸ್ವಚ್ಛವಾಗಿಡಲು ಸೂಚಿಸಿದರು. ವಸತಿ ನಿಲಯದ ಗ್ರಂಥಾಲಯಗಳಲ್ಲಿ ಸ್ಪರ್ಧಾತ್ಮಕ ಪರೀೆಗಳಿಗೆ ಸಂಬಂಧಿಸಿದಂತೆ ಉತ್ತಮ ಪುಸ್ತಕಗಳು, ದಿನಪತ್ರಿಕೆಗಳು, ಮಾಸ ಪತ್ರಿಕೆಗಳು, ಉದ್ಯೋಗ ಮಿತ್ರ ಪೂರೈಸಬೇಕು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪುಂಡಲೀಕ ಮಾನವರ, ಬಸವನಬಾಗೇವಾಡಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ನಿಡಗುಂದಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ವಂದಾಲ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಅಭಿಯಂತರ ವಿ.ಬಿ. ಗೊಂಗಡಿ, ೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಎಸ್​.ವಿ. ನಿಂಬಾಳ, ಉಕ್ಕಲಿ ಗ್ರಾಪಂ ಪಿಡಿಒ ಮಲ್ಲಿಕಾರ್ಜುನ ಹಿಟ್ನಳ್ಳಿ, ಎಚ್​.ಆರ್​. ವಡ್ಡರ, ಗ್ರಾಪಂ ಅಧ್ಯಕ್ಷ ಲಕ್ಷ$್ಮಣ ಮಾಗಿ, ಕಾರ್ಯದರ್ಶಿ ಜಿ.ಎಂ. ಬೇನಾಳಮಠ ಮತ್ತಿತರರಿದ್ದರು.

ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾ.ಪಂ. ವ್ಯಾಪ್ತಿಯ ಸರ್ಕಾರಿ ಉರ್ದು ಶಾಲೆಗೆ ಜಿಪಂ ಸಿಇಒ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪುಂಡಲೀಕ ಮಾನವರ ಮತ್ತಿತರರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net