ವಿವಿಧ ಕಾಮಗಾರಿಗಳಿಗೆ ಶಾಸಕ ಎಆರ್‌ಕೆ ಚಾಲನೆ

10-kollegalphoto-7,,
Published on

ಕೊಳ್ಳೇಗಾಲ: ಕ್ಷೇತ್ರದ ಟಗರಪುರ ಹಾಗೂ ಕುಂತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ವಿವಿಧ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ ನೀಡಿದರು.

ತಾಲೂಕಿನ ಟಗರಪುರ ಪಂಚಾಯಿತಿ ವ್ಯಾಪ್ತಿಯ ಆಲಹಳ್ಳಿ ಗ್ರಾಮದಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣವಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ, 1 ಲಕ್ಷ ರೂ. ವೆಚ್ಚದಲ್ಲಿ ಬಸವ ಭವನ ಮುಂದುವರಿದ ಕಾಮಗಾರಿ ಹಾಗೂ ಸಿ.ಸಿ. ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಕುಂತೂರು ಗ್ರಾ.ಪಂ. ವ್ಯಾಪ್ತಿಯ ಮಲ್ಲಹಳ್ಳಿ ಮಾಳ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದ ರಸ್ತೆ ಹಾಗೂ ಚಿಲಕವಾಡಿ ಬೆಟ್ಟದ ಸಮೀಪ 20 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಬಳಿಕ ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ಗ್ಯಾರಂಟಿಗಳನ್ನು ವಿರೋಧ ಪಕ್ಷ ಟೀಕಿಸುತ್ತಿದೆ. ಕಾಂಗ್ರೆಸ್ ಪಕ್ಷ ಜಾರಿಗೆ ಗ್ಯಾರಂಟಿ ಯೋಜನೆಯನ್ನು ದೆಹಲಿಯಲ್ಲಿ ಬಿಜೆಪಿ ಜಾರಿಗೆ ತಂದು ಅಧಿಕಾರ ಹಿಡಿದಿದ್ದಾರೆ. ಸಿದ್ದರಾಮಯ್ಯ ಅವರು ಭಾಗ್ಯಗಳನ್ನು ನೀಡಿದ ಸರದಾರರಾಗಿದ್ದಾರೆ ಎಂದರು.

ಸರ್ಕಾರದಿಂದ ಬೇಡಿಕೆಯಂತೆ ಈಗಾಗಲೇ 50 ಕೋಟಿ ರೂ. ವಿಶೇಷ ಅನುದಾನ ಬಂದಿದ್ದು ಕ್ಷೇತ್ರದಲ್ಲಿ ರಸ್ತೆಗಳು ಅಭಿಗೊಳ್ಳುತ್ತದೆ. ಸಚಿವ ಎಚ್.ಸಿ. ಮಹದೇವಪ್ಪ ಅವರು ಕೊಳ್ಳೇಗಾಲ ಡಾ.ಅಂಬೇಡ್ಕರ್ ಭವನ ಪೂರ್ಣಗೊಳಿಸಲು 3 ಕೋಟಿ, ಯಳಂದೂರು ತಾಲೂಕಿನಲ್ಲಿ ಅಂಬೇಡ್ಕರ್ ಭವನಕ್ಕೆ 50 ಲಕ್ಷ ರೂ. ನೀಡಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವೈ.ಕೆ. ಮೋಳೆಯಿಂದ ಬಿಳಿಗಿರಿರಂಗನ ಬೆಟ್ಟ ರಸ್ತೆ ಅಭಿವೃದ್ಧಿಗೆ ಅನುದಾನ ನೀಡಿದ್ದಾರೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿರುವ ಜನ ನಮಗೆ ಗೃಹಲಕ್ಷ್ಮಿ ಹಣ ಬೇಡ ಎಂದು ಪತ್ರ ಬರೆದಿದ್ದಾರೆ ಎಂದು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಕಾರ್ಯಕ್ರಮದಲ್ಲಿ ಆಲಹಳ್ಳಿ ಮಠದ ಶ್ರೀ ಇಮ್ಮಡಿ ಬಸಪ್ಪ ಸ್ವಾಮೀಜಿ, ತಾಲೂಕು ಗ್ಯಾರಂಟಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ಮೋಳೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಟಗರಪುರ ಗ್ರಾ.ಪಂ. ಅಧ್ಯಕ್ಷ ಮಹದೇವಸ್ವಾಮಿ, ಉಪಾಧ್ಯಕ್ಷೆ ರಾಜಮ್ಮ, ಕೆಆರ್‌ಐಡಿಎಲ್ ಎಇಇ ಚಿಕ್ಕಲಿಂಗಯ್ಯ, ನಿರ್ಮಿತಿ ಕೇಂದ್ರ ಉಪಯೋಜನಾ ವ್ಯವಸ್ಥಾಕ ಎಂ.ಪ್ರತಾಪ್ ಕುಮಾರ್, ಪಿಡಿಒ ಮಲ್ಲೇಶ್ ಇತರರಿದದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net