ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Published on

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025ನೇ ಸಾಲಿನ ಎಲೆಕ್ಟ್ರೀಷಿಯನ್, ಫಿಟ್ಟರ್ ಕೋರ್ಸ್‌ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2 ವರ್ಷ ಅವಧಿಯ ಎಲೆಕ್ಟ್ರೀಷಿಯನ್ ಹಾಗೂ ಫಿಟ್ಟರ್ ಕೋರ್ಸ್‌ಗೆ ತಲಾ 20 ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ ಮೂಲಕ ಅಥವಾ ಖುದ್ದಾಗಿ ಕಚೇರಿಗೆ ಬಂದು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 28ರವರೆಗೆ ಅವಕಾಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಬೊಮ್ಮಲಾಪುರ ರಸ್ತೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಕ್ಕ, ತೆರಕಣಾಂಬಿ, ಗುಂಡ್ಲುಪೇಟೆ ತಾಲೂಕು, ಚಾಮರಾಜನಗರ ಅಥವಾ ದೂ.ಸಂ 9008945123, 9110607107 ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net