

ಬೆಳಗಾವಿ: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮಾ ಪ್ರಶಸ್ತಿ ಯೋಜನೆಯಡಿ ಯಾವುದೇ ಕ್ಷೇತ್ರದಲ್ಲಿ ನಾವಿನ್ಯತೆ, ತಾರ್ಕಿಕ, ಕ್ರೀಡೆ, ಹಾಗೂ ಕಲೆ ಚಿತ್ರಕಲೆ, ಸಾಂಸ್ಕೃತಿಕ, ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವಂಥಹ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರಶಸ್ತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 5 ರಿಂದ 18 ವರ್ಷದೊಳಗಿನ ಅಂದರೆ ಜು.1 2005 ರಿಂದ ಜುಲೈ.31 2023 ರೊಳಗೆ ಹುಟ್ಟಿದ ಮಕ್ಕಳನ್ನು 2023 ನೇ ಸಾಲಿಗೆ ಆಯ್ಕೆ ಮಾಡಲಾಗುವುದು. ವಯೋಮಿತಿಯು 5 ವರ್ಷಗಳ ಮೇಲ್ಪಟ್ಟಿರಬೇಕು. ಹಾಗೂ 18 ವರ್ಷದೊಳಗಿರಬೇಕು. ಜಿಲ್ಲಾ ಮಟ್ಟದ ಪ್ರಶಸ್ತಿಯು ರೂ, 10 ಸಾವಿರ ರೂ ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯವರಾಗಿದ್ದು ಅಂತರಾಷ್ಟ್ರೀಯ ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದು, ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸುವುದು, ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕೀತ ಅಧಿಕಾರಿಗಳಿಂದ ದೃಢಿಕರಿಸಿ ಸಲ್ಲಿಸಬೇಕು. ಈ ಹಿಂದೆ ಯಾವುದಾದರೂ ವರ್ಷದಲ್ಲಿ ಅರ್ಜಿ ಪ್ರಶಸ್ತಿಗೆ ಪರಿಗಣಿಸಲ್ಪಟ್ಟಿದ್ದಲ್ಲಿ ಪುನಃ ಅದನ್ನು ಪರಿಗಣಿಸಲಾಗುವುದಿಲ್ಲ. 2023 ನೇ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ,ಶಿವಾಜಿ ನಗರದಲ್ಲಿ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸೆ.30 2023 ರೊಳಗೆ ಜಿಲ್ಲಾ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿನಗರ ಬೆಳಗಾವಿ-2407235 ಇವರನ್ನು ಸಂಪರ್ಕಿಸಬಹುದು ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವದಿಲ್ಲಾ ಎಂದು ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಪ್ರಕಣೆಯಲ್ಲಿ ತಿಳಿಸಿದ್ದಾರೆ.