ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮೈಲಿಗಲ್ಲು

ಚನ್ನರಾಯಪಟ್ಟಣದ ನಾಗೇಶ್ ಸಮೂಹ ವಿದ್ಯಾ ಸಂಸ್ಥೆಯಲ್ಲಿ 77ನೇ ಸ್ವಾತಂತ್ರೃ ದಿನಾಚರಣೆ ಪ್ರಯುಕ್ತ ಸಂಸ್ಥೆಯ ಅಧ್ಯಕ್ಷ ಡಾ.ಕೆ.ನಾಗೇಶ್ ಧ್ವಜಾರೋಹಣ ನೆರವೇರಿಸಿ ಮಹಾತ್ಮ ಗಾಂಧೀಜೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಫೋಟೋ ಶೀರ್ಷಿಕೆ 15 ಸಿಆರ್_ಪಿ-2 ಎ
Published on

ಚನ್ನರಾಯಪಟ್ಟಣ: ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ನಂತರ ಭಾರತ ದೇಶವು ಹಲವು ಮೈಲಿಗಲ್ಲುಗಳನ್ನು ಕಂಡಿದೆ. ಆರ್ಥಿಕತೆ, ರಾಜಕೀಯ, ತಂತ್ರಜ್ಞಾನ, ವಿಜ್ಞಾನ, ಮೂಲ ಸೌಕರ್ಯಗಳು ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಅನೇಕ ಸಾಧನೆಗಳಿಗೆ ಸಾಕ್ಷಿಯಾಗಿದೆ ಎಂದು ನಾಗೇಶ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಕೆ.ನಾಗೇಶ್ ತಿಳಿಸಿದರು.


ಪಟ್ಟಣದ ನಾಗೇಶ್ ಸಮೂಹ ವಿದ್ಯಾ ಸಂಸ್ಥೆಗಳ ಆವರಣದಲ್ಲಿ 77ನೇ ಸ್ವಾತಂತ್ರೃ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿಶ್ವದಲ್ಲೇ ಅತಿ ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ಹೊಂದಿರುವ ದೇಶ ಭಾರತ. ಸಾವಿರಾರು ಇಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪನೆ ಮಾಡಿ ಇಡೀ ವಿಶ್ವಕ್ಕೆ ಇಂಜಿನಿಯರುಗಳನ್ನು ವರದಾನವಾಗಿ ನೀಡಿ ಇಡೀ ವಿಶ್ವದಲ್ಲೇ ಗುರುತಿಸುವ ರೀತಿ ಭಾರತ ದೇಶ ರಾಷ್ಟ್ರ ಮಟ್ಟಕ್ಕೆ ಬೆಳೆದು ಅತಿ ಹೆಚ್ಚು ಯುವ ಜನಾಂಗವನ್ನು ಭಾರತ ದೇಶ ಹೊಂದಿದೆ. ಎಲ್ಲ ಕ್ಷೇತ್ರಗಳಲ್ಲೂ ಭಾರತ ಅಭಿವೃದ್ಧಿ ಹೊಂದುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.


ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಪಥಸಂಚಲನ ನಡೆಸುವ ಮೂಲಕ ಗಣ್ಯರಿಗೆ ಗೌರವ ವಂದನೆ ಸಲ್ಲಿಸಿದರು. ಅಲ್ಲದೆ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.


ನಾಗೇಶ್ ಎಜುಕೇಷನ್ ಟ್ರಸ್ಟ್ ಸಿಇಒ ಡಾ.ಭಾರತಿ ನಾಗೇಶ್, ನಿರ್ದೇಶಕರಾದ ನಾರಾಯಣ್, ಲಕ್ಷ್ಮೇಗೌಡರು ಮಾತನಾಡಿದರು. ಸಂಸ್ಥೆಯ ಡೀನ್ ಡಾ. ಸುಜಾ ಪಿಲಿಫ್, ಆಡಳಿತಾಧಿಕಾರಿ ಪಿಲಿಫ್ ಹಾಗೂ ನಾಗೇಶ್ ಹೆಲ್ತ್ ಆ್ಯಂಡ್ ಪ್ಯಾರಾಮೆಡಿಕಲ್ ಸೈನ್ ಕಾಲೇಜಿನ ಪ್ರಾಂಶುಪಾಲೆ ವಿದ್ಯಾರಾಣಿ ಉಪಸ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net