ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ydg04
Published on

ಸುರಪುರ: ಯಾವುದೇ ಅತ್ಯಾಧುನಿಕ ಸೌಲಭ್ಯ ನೀಡದೆ ಕೆಲಸ ಮಾಡುವಂತೆ ಒತ್ತಡ ಹೇರುತ್ತಿರುವುದನ್ನು ಖಂಡಿಸಿ, ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಸೋಮವಾರ ಗ್ರಾಮ ಆಡಳಿತಾಧಿಕಾರಿಗಳ ಸಂಘದ ತಾಲೂಕು ಘಟಕದಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು.

ಸಂಘದ ಪ್ರಮುಖರು ಮಾತನಾಡಿ, ಕಂದಾಯ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ೧೭ಕ್ಕೂ ಅಧಿಕ ಮೊಬೈಲ್ ಅಥವಾ ವೆಬ್ ತಂತ್ರಾAಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದಾರೆ. ಇದನ್ನು ನಿರ್ವಹಿಸಲು ಬೇಕಾದ ಮೊಬೈಲ್, ಲ್ಯಾಪ್‌ಟಾಪ್ ಸೇರಿ ಇತರೆ ಅತ್ಯಾಧುನಿಕ ಉಪಕರಣ ನೀಡುತ್ತಿಲ್ಲ. ಕೆಲಸ ಮಾಡಬೇಕು ಎಂಬುದಾಗಿ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳ ಸಾವು, ನೋವು, ಮಾರಣಾಂತಿಕ ಹಲ್ಲೆಯಂತಹ ಘಟನೆ ನಡೆಯುತ್ತಿವೆ ಎಂದು ದೂರಿದರು.

ವೃತ್ತಕ್ಕೆ ಒಂದರAತೆ ಮೊಬೈಲ್, ಲ್ಯಾಪ್‌ಟಾಪ್, ಗೂಗಲ್ ಕ್ರೋಮ್ ಬುಕ್, ಪ್ರಿಂಟರ್, ಇಂಟರ್‌ನೆಟ್ ಸೌಲಭ್ಯ ನೀಡುವವರೆಗೆ ಕೆಲಸ ಮಾಡುವುದಿಲ್ಲ. ನಮ್ಮ ವಿವಿಧ ಬೇಡಿಕೆ ಈಡೇರಿಸುವವರೆಗೂ ಸೆ.೨೬ರಿಂದ ಎಲ್ಲ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂಘಟನೆ ಅಧ್ಯಕ್ಷ ರವಿ ಒ.ಎಚ್, ಉಪಾಧ್ಯಕ್ಷ ದುಷಂತ್, ಪ್ರಧಾನ ಕಾರ್ಯದರ್ಶಿ ಬಸವರಾಜ, ಪ್ರದೀಪ ಕುಮಾರ, ಸಂತೋಷ ರಾಠೋಡ, ಬಸವರಾಜ ಬೋರ್ಗಿ, ಪ್ರಕಾಶ ರಾಠೋಡ, ಸುಮಂತ, ಬಿಂಗಿ ಹನುಮಂತ, ಮಲ್ಲಮ್ಮ, ಸಾವಿತ್ರಿ, ಸಮುಂಗಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net