ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

30
Published on


ಮೈಸೂರು:
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸು ಮಾಡಲು ಮತ್ತು ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮಂಗಳವಾರ ಜಮಾವಣೆಗೊಂಡ ಪ್ರತಿಭಟನಾಕಾರರು ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಕರ್ನಾಟಕ ಸರ್ಕಾರ ಎಸ್ಸಿ, ಎಸ್ಟಿ ಭೂ ಪರಭಾರೆ ನಿಷೇಧ ಕಾಯ್ದೆಗೆ ಪಿಟಿಸಿಎಲ್ ಅನ್ವಯವಾಗುವಂತೆ ತಿದ್ದುಪಡಿ ಮಾಡಬೇಕು. ಎಸ್ಸಿಪಿ, ಟಿಎಸ್ಪಿ ಹಣವನ್ನು ಸರ್ಕಾರ ಬೇರೆ ಉದ್ದೇಶಕ್ಕೆ ಸರ್ಕಾರ ಖರ್ಚು ಮಾಡಬಾರದು. 7(ಡಿ) ಕಾಯ್ದೆಯನ್ನು ಸರ್ಕಾರ ತಕ್ಷಣವೇ ರದ್ದುಪಡಿಸಬೇಕು. ಸುಳ್ಳು ಜಾತಿ ಪ್ರಮಾಣವನ್ನು ಪಡೆದು ಸೌಲಭ್ಯಗಳನ್ನು ಪಡೆಯುವವರ ವಿರುದ್ಧ ಮತ್ತು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಒಪಿಎಸ್ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಬಗರ್‌ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡಬೇಕು. ಸರ್ಕಾರಿ ಭೂಮಿಯಲ್ಲಿ ಮನೆ ಮತ್ತು ಗುಡಿಸಲು ಕಟ್ಟಿಕೊಂಡವರಿಗೆ ಹಕ್ಕುಪತ್ರ ನೀಡಬೇಕು. ನಿವೇಶನರಹಿತರಿಗೆ ಬಡವರಿಗೆ ವಾಸಕ್ಕೆ ಯೋಗ್ಯವಾದ ಭೂಮಿ ಖರೀದಿಸಿ, ನಿವೇಶನ ಹಕ್ಕುಪತ್ರ ನೀಡಬೇಕು. ವಸತಿ ನಿರ್ಮಾಣಕ್ಕೆ 5 ಲಕ್ಷ ರೂ. ಸಹಾಯಧನ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಸಂಚಾಲಕ ದೊಡ್ಡ ಉಗ್ರಯ್ಯ, ಮುಖಂಡರಾದ ಗೋಪಾಲಕೃಷ್ಣಸ್ವಾಮಿ, ಡಾ.ದಾಸ್ ಪ್ರಕಾಶ್, ಶಿವಕುಮಾರ್, ಅನಿಲ್‌ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net