ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಬೆಳಗಾವಿ ಚಲೋ

Published on

ಹುಬ್ಬಳ್ಳಿ: ಬಗರ್​ಹುಕುಂ ಸಾಗುವಳಿದಾರರಿಗೆ ಕೂಡಲೆ ಹಕ್ಕುಪತ್ರ ವಿತರಣೆ, ರೈತರ ಮೇಲಿರುವ ಮೊಕದ್ದಮೆ ವಜಾಗೊಳಿಸುವುದು ಮತ್ತಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ವಿುಕರ ಸಂಘಟನೆ ವತಿಯಿಂದ ಡಿ. 22 ರಂದು ಬೆಳಗ್ಗೆ 11ಗಂಟೆಗೆ ರೈತರ ಹಾಗೂ ಬಗರ್​ಹುಕುಂ ಸಾಗುವಳಿದಾರರ ಬೆಳಗಾವಿ ಚಲೋ ಏರ್ಪಡಿಸಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಎಚ್.ವಿ. ದಿವಾಕರ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಕೈಬಿಡಬೇಕು. ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಸಲು ನೀಡುತ್ತಿರುವುದನ್ನು ಹಿಂತೆಗೆದುಕೊಳ್ಳಬೇಕು. ಸ್ವಾಮಿನಾಥನ್ ವರದಿ ಪ್ರಕಾರ ರೈತರ ಬೆಳೆಗಳಿಗೆ ಕನಿಷ್ಠ ಬೆಲೆ ನಿಗದಿಪಡಿಸಬೇಕು. ಅರಣ್ಯ ಇಲಾಖೆ ಸುಪರ್ದಿಯಲ್ಲಿರುವ ಲಕ್ಷಾಂತರ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆಗೆ ವಾಪಸ್ ಪಡೆದು ಬಗರ್​ಹುಕುಂ ಸಾಗುವಳಿ ರೈತರಿಗೆ ಹಕ್ಕುಪತ್ರ ನೀಡಬೇಕು. ಬೆಳೆಹಾನಿ, ಮನೆಹಾನಿಗೆ ನ್ಯಾಯಯುತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆ ರಾಜ್ಯ ಕಾರ್ಯದರ್ಶಿ ಎಂ. ಶಶಿಧರ, ಲಕ್ಷ್ಮಣ ಜನಗಣ್ಣವರ, ಶರಣು ಗೋನವಾರ, ದೀಪಾ ಧಾರವಾಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net