ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ

A.Shivanna
Published on

ಚಾಮರಾಜನಗರ: ರಾಜ್ಯದ ನಿವೃತ್ತ ನೌಕರರಿಗೆ ಗಳಿಕೆ ರಜೆ ನಗದೀಕರಣ ಹಾಗೂ ಇನ್ನಿತರೆ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆ. 28ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ವತಿಯಿಂದ ಅನಿರ್ಧಿಷ್ಠಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಚಾಲಕ ಎ.ಶಿವಣ್ಣ ಮಾಹಿತಿ ನೀಡಿದರು.

ಸುಮಾರು 5 ತಿಂಗಳಿಂದ ಮುಖ್ಯಮಂತ್ರಿಗಳ ಗಮನ ಸೆಳೆದು ನಮ್ಮ ಬೇಡಿಕೆ ಈಡೇರಿಸುವಂತೆ ವಿವಿಧ ರೀತಿಯಲ್ಲಿ ಹೋರಾಟಗಳನ್ನು ಮಾಡುತ್ತ ಬಂದಿದ್ದೇವೆ. ಆದರೂ ನಮ್ಮ ಹೋರಾಟಕ್ಕೆ ಸರ್ಕಾರ ಸ್ಪಂದಿಸಿಲ್ಲ. ಈ ನಿಟ್ಟಿನಲ್ಲಿ ನಮ್ಮ ಹಕ್ಕೋತ್ತಾಯಗಳು ಈಡೇರುವವರಗೂ ಅನಿರ್ಧಿಷ್ಠಾವಧಿ

ಮುಷ್ಕರ ಮುಂದುವರೆಯಲ್ಲಿದ್ದು, ಫೆ.28ರಿಂದ ಆರಂಭವಾಗಲಿರುವ ಪ್ರತಿಭಟನಾ ಧರಣಿಯಲ್ಲಿ ಜಿಲ್ಲೆಯ ನಿವೃತ್ತನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಸರ್ಕಾರಿ ನೌಕರರ ವೇತನ ಭತ್ಯೆ ಹಾಗೂ ಪಿಂಚಣಿದಾರರ ಪಿಂಚಣಿಯನ್ನು ಪರಿಷ್ಕರಿಸಲು ಡಾ.ಸುಧಾಕರ್ ರಾವ್ ಅವರ ನೇತೃತ್ವದಲ್ಲಿ 7ನೇ ವೇತನ ಆಯೋಗವನ್ನು ರಚಿಸಲಾಗಿತ್ತು. ಸರ್ಕಾರವು ಈ ಸಂಬಂಧ ಆ.23 2024 ರಿಂದ ವೇತನ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. 2022 ಜು.1 ರಿಂದಲೇ ನಿವೃತ್ತಿ ವೇತನದ ವ್ಯತ್ಯಾಸವನ್ನು ಕೇಳುತ್ತಿಲ್ಲ. ಬದಲಾಗಿ ನಾವು ಕೇಳುತ್ತಿರುವುದು 7ನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದ ಮೇಲೆ ನಿವೃತ್ತಿ ಆರ್ಥಿಕ ಸೌಲಭ್ಯಗಳಾದ ಡಿಸಿಆರ್‌ಜಿ, ಕಮ್ಯುಟೇಷನ್ ಹಾಗೂ ಗಳಿಕೆ ರಜೆ ನಗದೀಕರಣಗಳ ಸೌಲಭ್ಯಗಳ ಲೆಕ್ಕಾಚಾರದ ವ್ಯತ್ಯಾಸದ ಮೊತ್ತವನ್ನು ಮಾತ್ರ ಎಂದು ಹೇಳಿದರು.

ಗೋಷ್ಠಿಯಲ್ಲಿ ತಾಲೂಕು ಸಂಚಾಲಕ ಕೆ.ಎನ್.ಶಿವಸ್ವಾಮಿ, ಎಚ್.ಮಹದೇವಯ್ಯ, ರುದ್ರಯ್ಯ, ಜ್ಞಾನಪ್ರಕಾಶ್, ಪ್ರಭುಸ್ವಾಮಿ, ಮುನಿಸ್ವಾಮಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net