ವಿವಿಧ ಬೇಡಿಕೆಗಳಿಗೆ ಅನಿರ್ದಿಷ್ಟಾವಧಿ ಧರಣಿ

27 YERRISWAMY 01
Published on

ಬಳ್ಳಾರಿ : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಸದಸ್ಯರು ಇಲ್ಲಿನ ಡಿಸಿ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಅನಿರ್ದಿಷ್ಟಾವಧಿ ಧರಣಿ ಮುಂದುವರೆಸಿದರು.
ಗ್ರಾಮ ಆಡಳಿತ ಹಾಗೂ ವಿಎ ಗಳಿಗೆ ಗುರಿ ನಿಗದಿಪಡಿಸಿ ಕೆಲಸ ಮಾಡಿಸುವುದನ್ನು ಕೈಬಿಡುವುದು ಸೇರಿದಂತೆ ಅವರ ಮೇಲೆ ಕೆಲಸ ಮಾಡಿಸಲು ಒತ್ತಡ ಹಾಕುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮವಹಿಸಬೇಕು. ಕಂದಾಯ ಇಲಾಖೆಯಿಂದ ಬೆಳೆ ಸಮೀಕ್ಷೆ, ಬಗರ್ ಹುಕುಂ ಭೂಮಿ ಗುರುತು ಮಾಡುವುದು ಸೇರಿದಂತೆ ಸುಮಾರು 17 ಮೊಬೈಲ್ ಆ್ಯಪ್‌ಗಳನ್ನು ಸೃಜಿಸಿ, ಕೆಲಸ ಮಾಡುವಂತೆ ಗ್ರಾಮ ಆಡಳಿತಾಧಿಕಾರಿಗಳಿಗೆ ಒತ್ತಡ ಹಾಕಲಾಗುತ್ತಿದೆ ಎಂದು ಆರೋಪಿಸಿದರು. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ, ಇದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net