ಬಳ್ಳಾರಿ : ಏಳನೇ ವೇತನ ಆಯೋಗದಂತೆ ಆರ್ಥಿಕ ಸೌಲಭ್ಯ ಕಲ್ಪಿಸಿ ಹಾಗೂ ಪರಿಷ್ಕ್ರತ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ಡಿಸಿ ಕಚೇರಿ ಮುಂಭಾಗದಲ್ಲಿ ರಾಜ್ಯ ನಿವೃತ್ತ ನೌಕರರು ಕಪ್ಪುಪಟ್ಟಿ ಧರಿಸಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಜುಲೈ 01 2022 ರಿಂದ ಜುಲೈ 31, 2024 ರ ಅವಧಿಯಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾದ ನೌಕರರಿಗೆ ಏಳನೇ ವೇತನ ಆಯೋಗದ ಅನುಸಾರ ಆರ್ಥಿಕ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಆರನೇ ವೇತನ ಆಯೋಗದಂತೆ ನಿವೃತ್ತಿಯ ಆರ್ಥಿಕ ಸೌಲಭ್ಯ ನೀಡಲಾಗಿದೆ. ನಷ್ಟವಾದ ನಿವೃತ್ತಿ ಆರ್ಥಿಕ ಸೌಲಭ್ಯವನ್ನು ಡಿಸಿಆರ್‌ಜಿ, ಕಮ್ಯುಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತ ಸೇರಿ ಏಳನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಬೇಕು ಎಂದು ಪ್ರತಿಭಟನ ನಿರತರು ಆಗ್ರಹಿಸಿದರು.