ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ

12 YERRISWAMY 05
Published on

ಬಳ್ಳಾರಿ : ನಿರುದ್ಯೋಗ ನಿವಾರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನಲೆ ಅಖಿಲ ಭಾರತ ನಿರುದ್ಯೋಗ ಯುವಜನ ಹೋರಾಟ ಸಮಿತಿ (ಎಐಯುವೈಎಸ್‌ಸಿ) ಸಂಘಟನೆಯು ನೂತನ ಡಿಸಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟಿಸಿತು.
ಜಿಲ್ಲಾ ಸಂಚಾಲಕ ಜಗದೀಶ್ ನೇಮಕಲ್ ಮಾತನಾಡಿ, ದೇಶದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಗುತ್ತಿಗೆ ಆಧಾರಿತ ಪದ್ಧತಿಯನ್ನು ಕೈಬಿಟ್ಟು ಖಾಯಂ ಉದ್ಯೋಗ ನೀಡಬೇಕು. ಉದ್ಯೋಗ ಕೊಡಲಾಗದಿದ್ದಲ್ಲಿ ಗೌರವನ್ವಿತವಾಗಿ ನಿರುದೋಗ ಭತ್ಯೆ ನೀಡಬೇಕು. ನಿರುದೋಗ್ಯದಿಂದ ಯುವಕರು ಮಾನಸಿಕ ಒತ್ತಡದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ವಿಶ್ವದಲ್ಲಿಯೇ ಅತಿ ಹೆಚ್ಚು ಯುವಕರನ್ನು ಹೊಂದಿರುವ ಈ ದೇಶದಲ್ಲಿ ಯುವಕರನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳುವಲ್ಲಿ ಹಲವು ಸರ್ಕಾರಗಳು ವಿಫಲವಾಗುತ್ತಿವೆ. ಆದ್ದರಿಂದ, ಸರ್ಕಾರ ದೇಶದಲ್ಲಿ ನಿರುದ್ಯೋಗ ನಿವಾರಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net