ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ

05 YERRISWAMY 07
Published on

ಬಳ್ಳಾರಿ : ಪ್ರತಿ ತಿಂಗಳು ಪಿಂಚಣಿ ನೀಡುವಂತೆ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಬುಧವಾರ ಪ್ರತಿಭಟಿಸಿತು.
ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಜಿಲ್ಲಾಧ್ಯಕ್ಷೆ ಈರಮ್ಮ ಮಾತನಾಡಿ, ದೇವದಾಸಿ ಮಹಿಳೆಯರಿಗೆ 2020 ರಿಂದ ಇಲ್ಲಿಯವರೆಗೆ ಸರ್ಕಾರ ಪಿಂಚಣಿ ಬಿಡುಗಡೆಗೊಳಿಸಿಲ್ಲ, ಕೂಡಲೇ ಬಿಡುಗಡೆ ಮಾಡಬೇಕು. ಜಿಲ್ಲೆ ಯ ಸಂಡೂರು ತಾಲೂಕಿನ ಬಂಡಿ ಗ್ರಾಮದಲ್ಲಿ ದೇವದಾಸಿ ಮಹಿಳೆಯರಿಗೆ ನಿವೇಶನಕ್ಕಾಗಿ ಸರ್ಕಾರ ಭೂಮಿ ನೀಡಿದ್ದು, ಇದರ ಬಗ್ಗೆ ಯೋಜನಾಧಿಕಾರಿಗಳು ಏನು ಕ್ರಮ ಕ್ರಮವಹಿಸಿಲ್ಲ ಎಂದು ದೂರಿದರು. ದೇವದಾಸಿ ಮಹಿಳೆಯರು ಈಗಾಗಲೇ ಗಂಗಾ ಕಲ್ಯಾಣ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ್ದು, ಅವರಿಗೆ ಬೋರ್ ವೆಲ್ ಕೊರೆಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net