

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಭಾನುವಾರ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ವಿವಿಧ ಮಠಗಳಿಗೆ ಭೇ ಟಿ ನೀಡಿ ಪೂಜ್ಯರ ಆಶೀರ್ವಾದ ಪಡೆದರು.
ಮುರುಘಾಮಠದಲ್ಲಿ ಡಾ.ಬಸವಪ್ರಭು ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಶ್ರೀ ಛಲವಾದಿ ಗುರುಪೀಠದ ಶ್ರೀ ಬಸವನಾ ಗೀದೇವ ಸ್ವಾಮೀಜಿ, ಶ್ರೀ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶ್ರೀ ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ತಿಪ್ಪೇಸ್ವಾಮಿ, ಭಾರ್ಗವಿ ದ್ರಾವಿಡ, ಸಂಪತ್‌ಕುಮಾರ್, ರುದ್ರಯ್ಯ, ಛಲವಾದಿ ತಿಪ್ಪೇಸ್ವಾಮಿ ಮೊದ ಲಾದ ಪ್ರಮುಖರು ಇದ್ದರು.