ವಿವಿಧೆಡೆ ಪರಿಸರ ದಿನಾಚರಣೆ

5 smg 5
Published on

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಪರಿಸರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಕರೊನಾ ಹಿನ್ನೆಲೆಯಲ್ಲಿ ಬಹುತೇಕ ಕಡೆಗಳಲ್ಲಿ ಸಭಾ ಕಾರ್ಯಕ್ರಮ ಆಯೋಜನೆಯಾಗಿರಲಿಲ್ಲ. ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್​ಕೆಜಿಎಂಎಂ ಮಹಾಸ್ವಾಮೀಜಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್.ಸರಸ್ವತಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ದೇವೇಂದ್ರಪ್ಪ ಇತರರಿದ್ದರು.

ಜನಶಿಕ್ಷಣ ಸಂಸ್ಥೆಯಿಂದ ಶಿಕಾರಿಪುರ ತಾಲೂಕು ಹೋತನಕಟ್ಟೆ, ಸೊರಬ ತಾಲೂಕು ಗುಡವಿಯಲ್ಲಿ ಪರಿಸರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಜನಶಿಕ್ಷಣ ಸಂಸ್ಥೆಯ ಸೋಮಿನಕೊಪ್ಪ ಕೇಂದ್ರ ಕಚೇರಿಯಲ್ಲಿ ಸಂಸ್ಥೆಯ ನಿರ್ದೇಶಕಿ ಎಸ್.ವೈ.ಅರುಣಾದೇವಿ ಗಿಡಕ್ಕೆ ನೀರೆರೆಯುವ ಮೂಲಕ ಪರಿಸರ ದಿನಾಚರಣೆ ಉದ್ಘಾಟಿಸಿದರು.

ಜೆಎನ್​ಎನ್​ಇ ಕಾಲೇಜು: ಪ್ರತಿಯೊಬ್ಬರೂ ಸಸಿ ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು. ಪರಿಸರ ಕಾಳಜಿ ಹೊಂದಿ ದಿನ ನಿತ್ಯ ಪ್ರಕೃತಿ ಉಳಿವಿಗೆ ಸಮಯ ನೀಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್.ಸರಸ್ವತಿ ತಿಳಿಸಿದರು.

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ನಗರದ ಜೆಎನ್​ಎನ್​ಸಿಇ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಗಿಡ ನೆಟ್ಟು ಮಾತನಾಡಿ, ಮಾನವನ ದುರಾಸೆಯಿಂದ ಪ್ರಕೃತಿ ನಾಶವಾಗುತ್ತಿದೆ. ಎಲ್ಲರೂ ಸರಳ ಜೀವನ ನಡೆಸುವ ಆಲೋಚನೆ ಬೆಳೆಸಿಕೊಳ್ಳಬೇಕು. ಇದರಿಂದ ಪರಿಸರ ಉಳಿವಿಗೆ ಕೊಡುಗೆ ನೀಡಿದಂತಾಗುತ್ತದೆ ಎಂದರು.

ಜಿಪಂ ಸಿಇಒ ಎಂ.ಎಲ್.ವೈಶಾಲಿ, ಸಿಸಿಎಫ್ ರವಿಶಂಕರ್, ಕಾಲೇಜಿನ ಪ್ರಾಚಾರ್ಯ ಎಚ್.ಆರ್.ಮಹದೇವಸ್ವಾಮಿ, ಎನ್​ಇಎಸ್ ಕಾರ್ಯದರ್ಶಿ ನಾಗರಾಜ್, ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷ ಡಾ.ಶ್ರೀಪತಿ, ಕಾರ್ಯದರ್ಶಿ ಡಾ. ನಾಗರಾಜ್ ಪರಿಸರ, ರಾಜ್ಯ ಯುವಜನ ಚಾರಣ ಸಂಸ್ಥೆ ಉಪಾಧ್ಯಕ್ಷ ಜಿ.ವಿಜಯ್ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ್ ದೇಸಾಯಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net