ವಿವಿಧೆಡೆ ರಸ್ತೆ ಕಾಮಗಾರಿಗೆ ಶಾಸಕ ಚಾಲನೆ

14ark2
Published on

ಅರಕಲಗೂಡು: ತಾಲೂಕಿನ ದೊಡ್ಡಮಗ್ಗೆ ಹೋಬಳಿಯ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿ 1.21 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಎ. ಮಂಜು ತಿಳಿಸಿದರು.

ಸಂತೆಮರೂರು ಗ್ರಾಪಂ ವ್ಯಾಪ್ತಿಯ ದುಮ್ಮಿ ಗ್ರಾಮದಲ್ಲಿ ಇತ್ತೀಚೆಗೆ 20 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಚಿಕ್ಕಮಗ್ಗೆ ಗ್ರಾಮದಲ್ಲಿ 11 ಲಕ್ಷ ರೂ., ದೊಡ್ಡಮಗ್ಗೆ ಗ್ರಾಮದಲ್ಲಿ 35 ಲಕ್ಷ ರೂ., ಕೊಡಕಹಳ್ಳಿ ಗ್ರಾಮದಲ್ಲಿ 30 ಲಕ್ಷ ರೂ., ದುಮ್ಮಿಕೊಪ್ಪಲು ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಗುತ್ತಿಗೆದಾರರು ಮುಂದಾಗಬೇಕು. ಕೊಡಕಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ದೇವಾಲಯ ನಿರ್ಮಾಣಕ್ಕೆ ಮುಂದಾಗಿದ್ದು ಅಗತ್ಯ ನೆರವು ನೀಡುವುದಾಗಿ ಹೇಳಿದರು.

ಗ್ರಾಪಂ ಸದಸ್ಯ ಸುರೇಶ್, ಮುಖಂಡರಾದ ಮಂಜುನಾಥ್, ಸುದೇಶ್, ಈರಯ್ಯ, ರಾಜೇಗೌಡ, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net