

ಕುಶಾಲನಗರ: ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿಧೋದ್ದೇಶ ಸಹಕಾರ ಸಂಘ ಕಳೆದ ಸಾಲಿನಲ್ಲಿ ಒಟ್ಟು 2.6 ಕೋಟಿ ರೂ.ಲಾಭಗಳಿಸಿದೆ ಎಂದು ಅಧ್ಯಕ್ಷ ಟಿ.ಆರ್.ಶರವಣಕುಮಾರ್ ತಿಳಿಸಿದರು.
ಸಂಘದಲ್ಲಿ 1305 ಸದಸ್ಯರಿದ್ದು, 319.76 ಕೋಟಿ ರೂ.ವಹಿವಾಟು ನಡೆಸಿದ್ದು, ಒಟ್ಟು 56 ಕೋಟಿ ರೂ.ಗೂ ಹೆಚ್ಚು ಠೇವಣಿ ಹೊಂದಿದೆ. ಠೇವಣಿಗೆ ಶೇ.8.5 ರಿಂದ 9.5 ಬಡ್ಡಿ ನೀಡಲಾಗುತ್ತಿದೆ. ಅಲ್ಲದೆ ಸಹಕಾರ ಸಂಘಗಳು, ಧಾರ್ಮಿಕ ಸಂಸ್ಥೆಗಳಿಗೆ ಶೇ.0.5 ದರದಲ್ಲಿ ಬಡ್ಡಿ ನೀಡಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.