ವಿವೇಕಾನಂದರ ವಿಚಾರಧಾರೆ ವಿಶ್ವಕ್ಕೆ ಮಾದರಿ

12blk1
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕಲದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು. ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು, ಸಚಿವ ಈಶ್ವರ ಖಂಡ್ರೆ, ಶಶಿಧರ ಕೋಸಂಬೆ, ಸಂಗಮೇಶ ಹುಣಜೆ ಮದಕಟ್ಟಿ, ರಾಜಕುಮಾರ ಬಿರಾದಾರ್, ಮೋಹನ ರೆಡ್ಡಿ, ಬಸವರಾಜ ಮೊಳಕೀರೆ ಇದ್ದರು.
Published on

ಭಾಲ್ಕಿ: ಸ್ವಾಮಿ ವಿವೇಕಾನಂದರ ಚಿಂತನೆ, ವಿಚಾರಧಾರೆ ವಿಶ್ವಕ್ಕೆ ಮಾದರಿಯಾಗಿವೆ. ಯುವಶಕ್ತಿ ವಿವೇಕರ ಜೀವನ ಅನುಸರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಭಾನುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಭಾರತದ ಶ್ರೇಷ್ಠ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸಿದರು. ಶಿಕಾಗೋದಲ್ಲಿ ಅವರು ಮಾಡಿದ ಭಾಷಣ ಇಂದಿಗೂ ಜನಮಾನಸದಲ್ಲಿ ಉಳಿದಿದೆ ಎಂದರು.

ದೇಶದ ಬಹುದೊಡ್ಡ ಸಂಪನ್ಮೂಲ ಆಗಿರುವ ಯುವಶಕ್ತಿ ಯಾವುದೇ ದುಶ್ಚಟ ದುರ್ಗುಣಗಳಿಗೆ ಬಲಿಯಾಗಬಾರದು. ವಿದ್ಯಾರ್ಥಿಗಳು ಮೊಬೈಲ್, ಫೇಸ್ಬುಕ್, ವಾಟ್ಸಾಪ್ ಗೀಳು ಹೆಚ್ಚಾಗಿ ಬಳಸಿಕೊಳ್ಳಬಾರದು. ವಿದ್ಯಾರ್ಥಿಗಳು, ಯುವಕರು ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ಅರ್ಥೈಸಿಕೊಂಡು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿದ್ದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಸ್ವಾಮಿ ವಿವೇಕಾನಂದರ ಜ್ಞಾನದ ಕಣಜ ಆಗಿದ್ದರು. ಅವರು ತಮ್ಮ ಜ್ಞಾನದ ಶಕ್ತಿ ಮೂಲಕ ದೇಶದ ಗೌರವ ಹಿರಿಮೆಯನ್ನು ಹೆಚ್ಚಿಸುವ ಪ್ರಯತ್ನ ಮಾಡಿದರು. ಅವರ ತತ್ವ, ಸಂದೇಶಗಳು ಪ್ರತಿಯೊಬ್ಬರಿಗೂ ಪ್ರೇರಣಾದಾಯಕವಾಗಿವೆ ಎಂದು ಹೇಳಿದರು.

ವಿದ್ಯಾರ್ಥಿನಿಯರಾದ ಶಿವಾನಿ, ಪಿಯುಷಾ ವಿವೇಕರ ಕುರಿತು ಮಾತನಾಡಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಪ್ರಥಮ ದರ್ಜೆ ಗುತ್ತಿಗೆದಾರರಾದ ಸಂಗಮೇಶ ಹುಣಜೆ ಮದಕಟ್ಟಿ, ರಾಜಕುಮಾರ ಬಿರಾದಾರ್, ಆಡಳಿತಾಧಿಕಾರಿ ಮೋಹನ ರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಮಹೇಶ ಹಂಪಾ, ಅನಿಲಕುಮಾರ ಹಾಲಕುಡೆ ಇತರರಿದ್ದರು. ಲಕ್ಷ್ಮಣ ಮೇತ್ರೆ ನಿರೂಪಣೆ ಮಾಡಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net