ವಿಶೇಷ ಉಪನ್ಯಾಸ ನಾಳೆ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಆಲೂರ ವೆಂಕಟರಾವ್​ 61ನೇ ಪುಣ್ಯಸ್ಮರಣೆ ನಿಮಿತ್ತ ನಗರದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್​ ರಾಷ್ಟ್ರೀಯ ಸ್ಮಾರಕ ಟ್ರಸ್ಟ್​ ವತಿಯಿಂದ ಫೆ. 25ರಂದು ಬೆಳಗ್ಗೆ 10.30ಕ್ಕೆ ಆಲೂರ ವೆಂಕಟರಾವ ಭವನದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.

ನಿವೃತ್ತ ಪ್ರಾಚಾರ್ಯ ಮನೀಶ ದೇಸಾಯಿ, ಡಾ. ಜಿನದತ್ತ ಹಡಗಲಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಟ್ರಸ್ಟ್​ ಅಧ್ಯಕ್ಷ ಡಾ. ಪ್ರಮೋದ ಗಾಯಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net