ಗದಗ: ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್ ನಿ., ಗದಗ ಹಾಗೂ ಧಾರವಾಡ ಹಾಲು ಒಕ್ಕೂಟ, ಧಾರವಾಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ರೋಣ ಹಾಗೂ ಗಜೇಂದ್ರಗಡ ತಾಲೂಕುಗಳ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರುಗಳಿಗೆ ಒಂದು ದಿನದ ವಿಶೇಷ ತರಬೇತಿ ಶಿಬಿರವನ್ನು ಗುರುವಾರ ಗಜೇಂದ್ರಗಡದ ಜಗದಂಬಾ ದೇವಸ್ಥಾನ ಹತ್ತಿರ ಶ್ರೀ ಜಗದಂಬಾ ಸಮುದಾಯಭವನದಲ್ಲಿ ಜರುಗಿತು.