

ಮದ್ದೂರು: ಪಟ್ಟಣದ ಕೋಟೆ ಬೀದಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವದ ಅಂಗವಾಗಿ ಶುಕ್ರವಾರ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇವರಿಗೆ ವಿಶೇಷ ಪೂಜೆ, ಅಭಿಷೇಕ, ಹೂವಿನ ಅಲಂಕಾರ, ಮಹಾ ಮಂಗಳಾರತಿ ಮಾಡಲಾಯಿತು. ಸಾವಿರಾರು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತಾದಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.