ವಿಶೇಷ ಪೂಜೆ ಸಲ್ಲಿಸಿದ ಶಿವರಾಜ್ ಕುಮಾರ್ ದಂಪತಿ

15-kgl-1,,,
Published on

ಕೊಳ್ಳೇಗಾಲ: ತಾಲೂಕಿನ ಶಿವನಸಮುದ್ರ ಸಮೂಹ ದೇವಾಲಯಗಳಿಗೆ ಭಾನುವಾರ ಚಿತ್ರನಟ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ನಟ ಶಿವರಾಜ್ ಕುಮಾರ್ ಡಿ.18ರಂದು ವಿದೇಶಕ್ಕೆ ತೆರಳುತ್ತಿದ್ದಾರೆ. ಹಾಗಾಗಿ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಶಿವನಸಮುದ್ರ ಸಮೂಹ ದೇವಾಲಯಗಳಿಗೆ ಭೇಟಿ ನೀಡಿದ್ದರು. ಬೆಂಗಳೂರಿನಿಂದ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಮಾರ್ಗವಾಗಿ ಶಿವನಸಮುದ್ರಕ್ಕೆ ಬೆಳಗ್ಗೆ 8.30ಕ್ಕೆ ಆಗಮಿಸಿ ಶಿವನಸಮುದ್ರದ ಕಾವೇರಿ ನದಿಗೆ ಬಾಗಿನ ಅರ್ಪಿಸಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಮಧ್ಯರಂಗನಾಥಸ್ವಾಮಿ, ಚಕ್ರಾಂಕಿತ ಮೀನಾಕ್ಷಿ ಸಮೇತ ಶ್ರೀ ಸೋಮೇಶ್ವರ ದೇವಾಲಯ ಹಾಗೂ ಆದಿಶಕ್ತಿ ಶಿಂಷಾ ಮಾರಮ್ಮನ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಶಿವರಾಜ್ ಕುಮಾರ್ ಆಗಮನ ಸುದ್ದಿ ತಿಳಿದ ಕೂಡಲೇ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದರು. ಪೂಜಾ ಕೈಂಕರ್ಯ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳಿದರು.

ಅಪ್ಪು ಟೀಂ ಅಧ್ಯಕ್ಷ ರಾಜೇಶ್, ಪ್ರಭು, ದಿವ್ಯ ಕುಮಾರ್ ಸತ್ತೇಗಾಲ, ಮನು, ನಾಗೇಶ್, ಶಿವರಾಜ್ ಕುಮಾರ್ ಅಭಿಮಾನಿ ಬಳಗದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net