

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಬಿ.ಇಡಿ ಮತ್ತು ಎಂ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.
ಮಾನ್ಯತೆ ಪಡೆದಿರುವ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 25 ಸಾವಿರ ರೂ.ಗಳ ವಿಶೇಷ ಪ್ರೋತ್ಸಾಹಧನ ನೀಡಲಾಗುವುದು.
ಅರ್ಹರು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಸೆ.21ರ ಒಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳ ಕಚೇರಿ, ಇಲಾಖೆ ವೆಬ್‌ಸೈಟ್ https://sevasindhu.karnataka.gov.in ಅಥವಾ ಸಹಾಯವಾಣಿ ಸಂಖ್ಯೆ 82777 99990 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.