ವಿಶೇಷ ಭೂಸ್ವಾಧೀನ ಅಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ

24RAVIG4
ದಾಖಲೆ ಪರಿಶೀಲನೆ ನಡೆಸುತ್ತಿರುವ ಎಸಿಬಿ ಅಧಿಕಾರಿಗಳು. ಕರುಣಾಕರ ಶೆಟ್ಟಿ, ಎ.ಎಸ್. ಗುದಿಗೊಪ್ಪ, ಸುನೀಲಕುಮಾರ, ಪರಮೇಶ್ವರ ಕವಟಗಿ ಇದ್ದಾರೆ.
Published on

ಬೆಳಗಾವಿ: ಹಿಡಕಲ್ ಡ್ಯಾಂನ ವಿಶೇಷ ಭೂಸ್ವಾಧೀನ ಅಧಿಕಾರಿಗಳ ಕಾರ್ಯಾಲಯದ ಮೇಲೆ ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ)ದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ನೀರಾವರಿ ಯೋಜನೆಗಳು ಹಾಗೂ ಮತ್ತಿತರ ಯೋಜನೆಗಳಿಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡುವಲ್ಲಿ ವಿನಾಕಾರಣ ವಿಳಂಬ ಮಾಡುವುದು, ಪರಿಹಾರದಲ್ಲಿ ತಾರತಮ್ಯ ಹಾಗೂ ಪರಿಹಾರ ಮಂಜೂರು ಮಾಡಲು ಕಮಿಷನ್ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಎಸಿಬಿ ಕಾರ್ಯಾಚರಣೆ ನಡೆಸಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಹಾಗೂ ಗದಗ ಜಿಲ್ಲೆಯ ಸುಮಾರು 35ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದು, ದಾಖಲೆಗಳ ಪರಿಶೀಲನೆ ಶುಕ್ರವಾರಕ್ಕೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಸಿಬಿ ಮೂಲಗಳು ತಿಳಿಸಿವೆ. ಎಸಿಬಿ ಬೆಳಗಾವಿ ಎಸ್ಪಿ ಬಿ.ಎಸ್. ನೇಮಗೌಡ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ, ಇನ್‌ಸ್ಪೆಕ್ಟರ್‌ಗಳಾದ ಎ.ಎಸ್. ಗುದಿಗೊಪ್ಪ, ಸುನೀಲಕುಮಾರ, ಪರಮೇಶ್ವರ ಕವಟಗಿ, ಆರ್.ಎಫ್. ದೇಸಾಯಿ ಹಾಗೂ ಸಮೀರ ಮುಲ್ಲಾ ಕಾರ್ಯಾಚರಣೆ ನೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net