ವಿಶ್ವ ಜನಸಂಖ್ಯಾ ದಿನಾಚರಣೆ ಜಾಗೃತಿ ಜಾಥಾ

HUN-AUG-7-2{POPULATION DAY}
ಹುಣಸೂರು ನಗರದ ಸರ್ಕಾರಿ ಬಾಲಕಿಯ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್ ಚಾಲನೆ ನೀಡಿದರು. ಡಾ.ಕೀರ್ತಿಕುಮಾರ್, ರಾಮೇಗೌಡ, ರಾಜೇಶ್ವರಿ ಇತರರಿದ್ದರು.
Published on

ಹುಣಸೂರು: ತಾಲೂಕು ಆರೋಗ್ಯಾಧಿಕಾರಿ ಕಚೇರಿ ಮತ್ತು ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಸೋಮವಾರ ಜಾಗೃತಿ ಜಾಥಾ ನಡೆಸಲಾಯಿತು.

ಕಾಲೇಜು ಆವರಣದಲ್ಲಿ ಜಾಥಾಕ್ಕೆ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್ ಚಾಲನೆ ನೀಡಿದರು. ಮಾನವ ಸಂಪನ್ಮೂಲ ದೇಶದ ಆಸ್ತಿಯೂ ಆಗಬಹುದು, ಶಾಪವೂ ಆಗಬಹುದು. ವಿಶ್ವ ಜನಸಂಖ್ಯೆಯ ಏರುಮುಖದಿಂದಾಗಿ ಜಾಗತಿಕ ತಾಪಮಾನದಿಂದ ಆರ್ಥಿಕ, ಸಾಮಾಜಿಕ ಸಮಸ್ಯೆಗಳ ಗೂಡಾಗಿ ವಿಶ್ವ ಮಾರ್ಪಡುತ್ತಿದೆ. ಜನಸಂಖ್ಯಾ ನಿಯಂತ್ರಣಕ್ಕಾಗಿ ಚೀನಾ ಕೈಗೊಂಡ ಕ್ರಮಗಳು ಇದೀಗ ಆ ದೇಶಕ್ಕೆ ನಕಾರಾತ್ಮಕ ಪರಿಣಾಮಗಳನ್ನು ಉಂಟು ಮಾಡುತ್ತಿದೆ. ಹೀಗಾಗಿ ಭಾರತದಲ್ಲೂ ಜನಸಂಖ್ಯಾ ನಿಯಂತ್ರಣಕ್ಕೆ ಸರ್ಕಾರ ನಿರ್ದಿಷ್ಟ ಕ್ರಮಗಳನ್ನು ಅನುಸರಿಸುವತ್ತ ಮುಂದಾಗಬೇಕಿದೆ ಎಂದರು.

ಭೂಮಿಯ ಮೇಲಿನ ಸಂಪನ್ಮೂಲಗಳನ್ನು ಬಳಸುವ ಹಕ್ಕು ನಮಗಿದೆ. ಆದರೆ ಅದನ್ನು ಮುಂದಿನ ಪೀಳಿಗೆಗೆ ಸುಸ್ಥಿತಿಯಲ್ಲಿ ಬಿಟ್ಟುಹೋಗುವ ಜವಾಬ್ದಾರಿಯೂ ನಮ್ಮದು ಎನ್ನುವುದನ್ನು ಎಲ್ಲರೂ ಅರಿಯಬೇಕೆಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಕೀರ್ತಿಕುಮಾರ್, ಕಾಲೇಜಿನ ಪ್ರಾಂಶುಪಾಲ ರಾಮೇಗೌಡ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಜೇಶ್ವರಿ, ವಿಶ್ವನಾಥ್, ಹಿರಿಯ ಆರೋಗ್ಯ ಸಹಾಯಕಿ ಅನಂತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net