ವಿಶ್ವ ಮಾನವ ಸಂದೇಶ ಸಾರಿದ ಬೇಡನ್ ಪೊವೆಲ್

bkt-23-2
ಬಾಗಲಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಮತ್ತು ಭಾರತ ಸ್ಕೌಟ್ಸ್ ಗೈಡ್ಸ್ ಘಟಕಗಳ ಆಶ್ರಯದಲ್ಲಿ ಶನಿವಾರ ವಿಶ್ವ ಭಾರತ ಸ್ಕೌಟ್ಸ್ ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.
Published on

ಬಾಗಲಕೋಟೆ: ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ಲಾರ್ಡ ಬೇಡನ್ ಪೊವೆಲ್ ಅವರ ಬದುಕು ಮತ್ತು ಸಾಧನೆ ಯುವ ಸಮೂಹಕ್ಕೆ ಮಾದರಿಯಾಗಿದೆ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕ ಪ್ರಮೋದ ಚೌಗಲೆ ಹೇಳಿದರು.

ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಮತ್ತು ಭಾರತ ಸ್ಕೌಟ್ಸ್ ಗೈಡ್ಸ್ ಘಟಕಗಳ ಆಶ್ರಯದಲ್ಲಿ ಶನಿವಾರ ಲಾರ್ಡ ಬೇಡನ್ ಪೊವೆಲ್ ಮತ್ತು ಲೇಡಿ ಪೊವೆಲ್ ಅವರ ಜನ್ಮ ದಿನದ ಅಂಗವಾಗಿ ವಿಶ್ವ ಭಾರತ ಸ್ಕೌಟ್ಸ್ ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ವಿಶ್ವ ಚಿಂತನಾ ದಿನಾಚರಣೆ ಕಾರ್ಯಕ್ರಮದಲ್ಲಿ ಲಾರ್ಡ ಬೇಡನ್ ಪೊವೆಲ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಜೊತೆಗೆ ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸದಸ್ಯರಾಗಿ ಸಾಮಾಜಿಕ ಸೇವೆ ಮಾಡುವ ಮನೋಭಾವ ಬೆಳೆಸಿಕೊಂಡು ಆದರ್ಶ ವ್ಯಕ್ತಿಗಳಾಬೇಕು ಎಂದರು.

ಪ್ರಾಂಶುಪಾಲ ಡಾ.ಅರುಣಕುಮಾರ ಗಾಳಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಘಟಕದಲ್ಲಿ ಪ್ರವೇಶ ಪಡೆದುಕೊಂಡು ಅದರ ಸದುಪಯೋಗವನ್ನು ತಮ್ಮಲ್ಲಿ ರೂಢಿಸಿಕೊಳ್ಳಬೇಕು. ವಿಶ್ವಕ್ಕೆ ಉತ್ತಮ ಮಾನವ ಸಂದೇಶ ಸಾರಿದ ಬೇಡನ್ ಪೊವೆಲ್ ಅವರ ವಿಚಾರ ಮತ್ತು ಜೀವನಾದರ್ಶಗಳನ್ನು ತಮ್ಮಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಸುಂದರ ಬದುಕು ನಿರ್ಮಿಸಿಕೊಳ್ಳಬೇಕು ಎಂದು ತಿಳಿಸಿದರು.

ರೇಂಜರ ಜ್ಯೋತಿ ಕೊಟೆಕಲ್ಲ ಲಾರ್ಡ ಬೇಡನ್ ಪೊವೆಲ್ ಅವರ ಸಾಧನೆಗಳು ಕುರಿತು ಉಪನ್ಯಾಸ ನೀಡಿದರು. ರೋವರ್ ಲೀಡರ್ ಪ್ರೊ.ಪರಸಪ್ಪ ತಳವಾರ ಪ್ರಾಸ್ತಾವಿಕ ನುಡಿ ಹೇಳಿದರು.

ಸಾಂಸ್ಕೃತಿಕ ವಿಭಾಗದ ಸಂಚಾಲಕ ಡಾ.ಜಿ.ಜಿ.ಹಿರೇಮಠ, ಜಿಲ್ಲಾ ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಶಿಕ್ಷಕರ ಘಟಕದ ನಾರಾಯಣ ಯಳ್ಳಿಗುತ್ತಿ, ರೋವರ್ ಲೀಡರ್ ಡಾ.ಚಂದ್ರಶೇಖರ ಕಾಳನ್ನವರ, ಪ್ರೊ.ಪರಸಪ್ಪ ತಳವಾರ, ರೇಂಜರ್ ಲೀಡರ್ ಡಾ.ಸುಮಂಗಲಾ ಮೇಟಿ, ಪ್ರೊ.ಸವಿತಾ ಬಾದಾಮಿ ಉಪಸ್ಥಿತರಿದ್ದರು. ರೇಂಜರ್ ಸಾಬಮ್ಮ ಪ್ರಾರ್ಥಿಸಿದರು, ಡಾ.ಸುಮಂಗಲಾ ಮೇಟಿ ಸ್ವಾಗತಿಸಿದರು, ರೋವರ್ ಸಾಗರ ಚವ್ಹಾನ ವಂದಿಸಿದರು. ರೇಂಜರ್ ಸರೋಜಾ ಬೆಳಗಲಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net