

ಚಿತ್ರದುರ್ಗ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಮಾಜಿ ಪ್ರಧಾನಿ ಡಾ. ಮನಮೋಹನ್‌ಸಿಂಗ್ ನಿಧನದ ಶೋಕಾಚರಣೆ ಹಿನ್ನಲೆಯಲ್ಲಿ ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಹಮ್ಮಿಕೊಂಡಿದ್ದ ಕಾರ‌್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ. ಗುರುನಾಥ್, ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಕೆ.ಟಿ. ಸುರೇಶಾಚಾರ್ಯ, ವಿಶ್ವಕರ್ಮ ಕಾಳಿಕಾಂಬ ಕಲ್ಯಾಣ ಮಂಟಪ ಟ್ರಸ್ಟ್ ಅಧ್ಯಕ್ಷ ಎ. ಶಂಕರಾಚಾರ್, ಉಪಾಧ್ಯಕ್ಷ ಬಾಲಬ್ರಹ್ಮಚಾರ್, ಮುಖಂಡರಾದ ನಾಗಾರಾಜಾಚಾರ್, ಶಿಲ್ಪಿ ಸುರೇರ್, ಸುನೀಲ್ ಕುಮಾರ್, ಆನಂದಚಾರ್, ನಾಗೇಂದ್ರಚಾರ್, ಶಿವಣ್ಣಚಾರ್, ಮಂಜುನಾಥ ಆಚಾರ್, ಮಲ್ಲಿಕಾರ್ಜುನಾಚಾರ್ ಮತ್ತಿತರರು ಇದ್ದರು.