ವಿಶ್ವಕರ್ಮ ಜಯಂತಿ ೧೭ರಂದು

vishwakarma download
Published on

ಕಲಬುರಗಿ: ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಸೆ.೧೭ರಂದು ಮಧ್ಯಾಹ್ನ ೩ಕ್ಕೆ ಹಮ್ಮಿಕೊಳ್ಳಲಾಗಿದೆ. ವಿಶ್ವಕರ್ಮ ಸಮಾಜದ ಮಠಾಧೀಶರು ಸಾನ್ನಿಧ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸುವರು. ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳುವರು. ಶಹಾಬಾದ್‌ನ ಮರಗೋಳ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ.ಗುರುಮೂರ್ತಿ ಬಡಿಗೇರ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಜಯಂತ್ಯುತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net