ವಿಶ್ವಕ್ಕೆ ಯೋಗ ಪರಿಚಯಿಸಿದ ಸುಯೋಗ ನಮ್ಮದು

1001436306
Published on

ಆಲೂರು: ಯೋಗ ಮಾನಸಿಕ, ಶಾರೀರಿಕ ಸಮತೋಲನ ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ಆಲೂರು-ಕಟ್ಟಾಯ ಮಂಡಲ ಬಿಜೆಪಿ ಅಧ್ಯಕ್ಷೆ ಉಮಾ ರವಿ ಪ್ರಕಾಶ್ ಹೇಳಿದರು.

ಆಲೂರು ಪಟ್ಟಣದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುಯೋಗ ಚೇತನ ಬಳಗದಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯೋಗದ ಮೂಲ ಭಾರತ. ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಸುಯೋಗ ನಮ್ಮದು. ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆಯನ್ನು ಸುಲಭದಲ್ಲಿ ಯೋಗದ ಮೂಲಕ ಎಲ್ಲರೂ ಪಡೆಯಬಹುದಾಗಿದೆ ಎಂದರು.

ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ನೆರವಾಗುತ್ತದೆ. ಹೀಗಾಗಿ, ಯೋಗವನ್ನು ಎಲ್ಲರೂ ಅಭ್ಯಸಿಸಿ ಎಂದು ತಿಳಿಸಿದರು.

ಯೋಗ ಶಿಕ್ಷಕಿ ಇಂದು ರೇಣುಕಾ ಪ್ರಸಾದ್ ಮಾತನಾಡಿ, ಯೋಗವನ್ನು ನಿಯಮಿತವಾಗಿ ಮಾಡುವುದರಿಂದ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆಹಾರ ಪದ್ಧತಿ, ಜೀವನ ಶೈಲಿಯಿಂದ ಬರಬಹುದಾದ ವಿವಿಧ ಕಾಯಿಲೆಗಳಿಂದ ಮುಕ್ತಿ ಪಡೆಯಬಹುದು. ಮಾನಸಿಕ ಆರೋಗ್ಯ ವೃದ್ಧಿಸಿಕೊಳ್ಳುವುದು ಕೂಡ ಯೋಗದ ಮಹತ್ವಗಳಲ್ಲಿ ಒಂದು ಎಂದರು.

ಜೆಡಿಎಸ್ ಮುಖಂಡ ಕೆ.ವಿ.ಮಲ್ಲಿಕಾರ್ಜುನ್ ಮಾತನಾಡಿ, ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೋ ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯ. ಯೋಗದಿಂದ ಆರೋಗ್ಯಕರ ಜೀವನ ನಡೆಸಬಹುದರು ಎಂದರು.

ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಶಾ ಮಲ್ಲಿಕಾರ್ಜುನ್, ಸುಯೋಗ ಚೈತನ್ಯ ಬಳಗದ ಸದಸ್ಯರಾದ ಬಾಲಣ್ಣ, ಕುಮಾರ್, ಸುವರ್ಣಾ, ಧರಣಿ, ಕವಿತಾ, ವಿಮಲಾ, ಕಾಂತರಾಜು, ಕಲ್ಪನಾ, ಆಶಾ, ಲಯನ್ಸ್ ಸೇವಾ ಸಂಸ್ಥೆ ಮಾಜಿ ಅಧ್ಯಕ್ಷೆ ರೇಣುಕಾ ಪ್ರಸಾದ್, ಬೈರಾಪುರ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್, ಬಿಜೆಪಿ ಮುಖಂಡರಾದ ಕಿರಣ್, ನಿತಿನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net