ವಿಶ್ವದ ಶ್ರೇಷ್ಠ ದಾರ್ಶನಿಕ ಅಂಬೇಡ್ಕರ್

14Athni1
Published on

ಅಥಣಿ: ಬಸವಣ್ಣನ ವಿಚಾರಧಾರೆಯಿಂದ ಪ್ರೇರಿತರಾದ ಡಾ.ಅಂಬೇಡ್ಕರ್ ವಿಶ್ವಶ್ರೇಷ್ಠ ದಾರ್ಶನಿಕ. ಅವರನ್ನು ಒಂದು ಜಾತಿಗೆ ಸೀಮಿತ ಮಾಡದೆ ಎಲ್ಲರೂ ಅವರ ಜಯಂತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಕರೆ ನೀಡಿದರು.

ಪಟ್ಟಣದ ತೋಟಗಾರಿಕೆ ಇಲಾಖೆ ಆವರಣದಲ್ಲಿ ತಾಲೂಕಾಡಳಿತ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ, ತಾಪಂ ಸಹಯೋಗದಲ್ಲಿ ಸೋಮವಾರ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಪನ್ಯಾಸಕ ಆನಂದಕುಮಾರ ಜಕ್ಕಣ್ಣವರ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳೆ, ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ, ಸಿದ್ದಾರ್ಥ ಸಿಂಗೆ ಮಾತನಾಡಿದರು.

ಪಿಯುಸಿಯಲ್ಲಿ ಹೆಚ್ಚು ಅಂಕಪಡೆದ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳು ಮತ್ತು ಸಾಧಕರನ್ನು ಗೌರವಿಸಲಾಯಿತು. ತಹಸೀಲ್ದಾರ್ ಸಿದರಾಯ ಭೋಸಗಿ, ತಾಪಂ ಇಒ ಶಿವಾನಂದ ಕಲ್ಲಾಪುರ, ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ, ಸಮಾಜ ಕಲ್ಯಾಣಾಧಿಕಾರಿ ಬಸವರಾಜ ಯಾದವಾಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net