ವಿಶ್ವಮಟ್ಟದಲ್ಲಿ ಭಾರತದ ಹಿರಿಮೆ ಹೆಚ್ಚಳ

Janardanaswamy
Published on

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ವಿಶ್ವಮಟ್ಟದಲ್ಲಿ ಭಾರತದ ಹಿರಿಮೆ ಹೆಚ್ಚಿಸಿದ್ದಾರೆ. ಯಾವುದೇ ರಾಷ್ಟ್ರದಲ್ಲಿ ಯುದ್ಧ ನಡೆದರೂ, ಭಯೋತ್ಪಾದನೆಗೆ ಕಡಿವಾಣ ಹಾಕಲು ಅವರಂತ ನಾಯಕತ್ವ ಜಾಗತಿಕ ಮಟ್ಟದಲ್ಲಿ ತುಂಬಾ ಅನಿವಾರ್ಯತೆ ಇದೆ ಎಂದು ಮಾಜಿ ಸಂಸದ ಜನಾರ್ದನಸ್ವಾಮಿ ಹೇಳಿದರು.

ಗುರುವಾರ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಈ ಹಿಂದೆ ನಾನೂ ಸಂಸದನಾಗಿದ್ದ ಅವಧಿಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಇಸ್ರೋ, ಡಿಆರ್‌ಡಿಒ ಸಂಸ್ಥೆ ಬರಲಿಕ್ಕೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಭದ್ರಾ ಮೇಲ್ದಂಡೆಗೆ ಅನುದಾನ ಬಿಡುಗಡೆ ಮಾಡಿದ್ದು, ಮೊದಲು ಬಿಜೆಪಿ. ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗ ಮಂಜೂರಾಗಿದ್ದಕ್ಕೂ ನಮ್ಮ ಪಕ್ಷ ಕಾರಣ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ರಾಜ್ಯದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ ಎಂದರು.

ಭಾರತ ಚೀನಾ ದೇಶವನ್ನು ಕೈಗಾರಿಕೆ ಸೇರಿ ಎಲ್ಲ ವಲಯಗಳಲ್ಲೂ ಹಿಂದಿಕ್ಕಿ ಆರ್ಥಿಕವಾಗಿ ಇನ್ನಷ್ಟು ಬಲಗೊಳ್ಳಲು, ಉನ್ನತ ಮಟ್ಟಕ್ಕೆ ತಲುಪಲು ಮೋದಿ ಅವರನ್ನು 3ನೇ ಬಾರಿ ಪ್ರಧಾನಿಯಾಗಿಸುವ ಹೊಣೆಗಾರಿಕೆ ದೇಶದ ಪ್ರತಿಯೊಬ್ಬ ಮತದಾರರದ್ದಾಗಿದೆ ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net