ವಿಶ್ವಮಾನವ ಶಾಲೆ ವಿದ್ಯಾರ್ಥಿಗಳ ಸಾಧನೆ

Vishwamanava
Published on

ಚಿತ್ರದುರ್ಗ: ಕೋಟೆನಗರಿಯಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಸೀಬಾರ-ಗುತ್ತಿನಾಡು ಸಮೀಪದ ವಿಶ್ವಮಾನವ ವಸತಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ಚೆಸ್‌ನಲ್ಲಿ ಪಿ.ನಾಗರಾಜ್ ಹಾಗೂ ಕರಾಟೆ ಸ್ಪರ್ಧೆಯಲ್ಲಿ ಎಚ್.ಸಿ.ಸಮರ್ಥ್, ಜಿ.ಕೆ.ನಂದನ್ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ಎಂ.ನೀಲಕಂಠ ದೇವರು, ರೂವಾರಿ ಎಚ್.ಜಲೀಲ್‌ಸಾಬ್, ಮುಖ್ಯಶಿಕ್ಷಕ ಜಿ.ಆರ್.ಚನ್ನಬಸಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net