ವಿಶ್ವವಿದ್ಯಾಲಯ ಮಹಿಳಾ ವಾಲಿಬಾಲ್ ತಂಡಕ್ಕೆ ಆಯ್ಕೆ

bkt-16-2
ವಿಶ್ವ ವಿದ್ಯಾಲಯ ಮಹಿಳಾ ವಾಲಿಬಾಲ್ ತಂಡಕ್ಕೆ ಆಯ್ಕೆಯಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೇಣುಕಾ ಮಡಿವಾಳರ, ದೀಪಾ ರಾಠೋಡ, ಅರ್ಪಿತಾ ಪೂಜಾರಿ, ಉಷಾ ರಾಠೋಡ, ಗಾಯತ್ರಿ ಲಮಾಣಿ ಹಾಗೂ ಪ್ರಾಚಾರ್ಯ ಅರುಣಕುಮಾರ ಗಾಳಿ, ಐಕ್ಯೂಎಸಿ ಸಂಚಾಲಕಿ ಡಾ.ಲಕ್ಷಿ÷್ಮÃ ಕಟ್ಟಿಮನಿ, ಕ್ರೀಡಾ ನಿರ್ದೇಶಕ ನೀಲಪ್ಪ ಕುರಿ ಇದ್ದರು.
Published on

ಬಾಗಲಕೋಟೆ: ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐದು ವಿದ್ಯಾರ್ಥಿನಿಯರು ಬಾಗಲಕೋಟೆ ವಿಶ್ವವಿದ್ಯಾಲಯ ಮಹಿಳಾ ವಾಲಿಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕ್ರೀಡಾ ನಿರ್ದೇಶಕ ನೀಲಪ್ಪ ಕುರಿ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರಾದ ರೇಣುಕಾ ಮಡಿವಾಳರ, ದೀಪಾ ರಾಠೋಡ, ಅರ್ಪಿತಾ ಪೂಜಾರಿ, ಉಷಾ ರಾಠೋಡ, ಗಾಯತ್ರಿ ಲಮಾಣಿ ಆಯ್ಕೆಯಾಗಿದ್ದು, ಈ ಕ್ರೀಡಾಪಟುಗಳು ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಗಲಕೋಟೆ ವಿವಿ ತಂಡವನ್ನು ಪ್ರತಿನಿಽಸಲಿದ್ದಾರೆ ಎಂದು ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net