ವಿಷ ಸೇವಿಸಿ ದಂಪತಿ ಆತ್ಮಹತ್ಯೆ

Published on

ಕಮಲನಗರ(ಗ್ರಾ): ಡಿಗ್ಗಿ ಗ್ರಾಮದಲ್ಲಿ ಮಂಗಳವಾರ ವಿಷಸೇವಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜಯಕುಮಾರ ಗುಂಡಪ್ಪ (45), ಸವಿತಾ (35) ಮೃತರು. ಆಟೋ ಚಾಲಕನಾಗಿದ್ದ ಸಂಜಯಕುಮಾರ ಕುಡಿತಕ್ಕಾಗಿ ಸಾಲ ಮಾಡಿಕೊಂಡಿದ್ದ. ತೀರಿಸುವುದು ಹೇಗೆ ಎಂಬ ಚಿಂತೆಯಲ್ಲೇ ಸಾವಿಗೆ ಶರಣಾಗಿರಬಹುದು ಎನ್ನಲಾಗುತ್ತಿದೆ. ಡಿವೈಎಸ್ಪಿ ಜೇಮ್ಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಕಮಲನಗರ ಠಾಣೆಯಲ್ಲಿ ಪ್ರಕಾರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net