ವಿಷಯ ತಜ್ಞರ ಸಮಿತಿಗೆ ನೇಮಕ

h1-P.M. patil
Published on

ಹುಬ್ಬಳ್ಳಿ: ವಿಶ್ವವಿದ್ಯಾಲಯ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ವಿಜ್ಞಾನ ಮತ್ತು ತಂತ್ರಜ್ಞಾನ ಮೂಲಸೌಕರ್ಯಗಳ ಸುಧಾರಣೆಗೆ ಮಾರ್ಗದರ್ಶನ ನೀಡಲು ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ರಚಿಸಿರುವ ವಿಷಯ ಪರಿಣಿತರ ಸಮಿತಿ (ಗಣಿತ ವಿಜ್ಞಾನ)ಯ ಸದಸ್ಯರಾಗಿ ಹುಬ್ಬಳ್ಳಿಯ ಕೆಎಲ್​ಇ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಪಿ.ಎಂ. ಪಾಟೀಲ ನೇಮಕಗೊಂಡಿದ್ದಾರೆ.

ಪಾಟೀಲ ಅವರು ಸಮಿತಿಯಲ್ಲಿ ಸ್ಥಾನ ಪಡೆದ ಕರ್ನಾಟಕದ ಏಕೈಕ ವ್ಯಕ್ತಿಯಾಗಿದ್ದಾರೆ. ಸಮಿತಿಯ ಸದಸ್ಯರ ಅವಧಿ 3 ವರ್ಷಗಳದ್ದಾಗಿದೆ. ರಾಷ್ಟ್ರೀಯ ವಿಜ್ಞಾನ ಅಕಾಡೆಮಿಯ ಫೆಲೋ ಆಗಿರುವ ಪಾಟೀಲ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net