

ಮೈಸೂರು: ಮೈಸೂರು ತಾಲೂಕಿನ ಉದ್ಬೂರು ಬಳಿಯ ಹಾಲಾಳು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ವಿಷ್ಣು ಸ್ಮಾರಕದಲ್ಲಿ ಖ್ಯಾತ ನಟ, ಸಾಹಸಸಿಂಹ ದಿವಂಗತ ಡಾ.ವಿಷ್ಣುವರ್ಧನ್ ಅವರ 72ನೇ ಜನ್ಮದಿನವನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು.
ಬೆಂಗಳೂರಿನಿಂದ ಇಲ್ಲಿಗೆ ಆಗಮಿಸಿದ ಹಿರಿಯ ನಟಿ ಡಾ.ಭಾರತಿ ವಿಷ್ಣುವರ್ಧನ್ ಅವರು ವಿಷ್ಣು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸಿ ಪೂಜೆ ಸಲ್ಲಿಸಿದರು. ವಿಷ್ಣುವರ್ಧನ್ ಅವರ ಪುತ್ರಿ ಕೀರ್ತಿ, ಅಳಿಯ ಅನಿರುದ್ಧ ಭಾಗಿಯಾಗಿದ್ದರು.
ಅಲ್ಲದೆ, ಸ್ಮಾರಕದ ಬಳಿ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾವಣೆಗೊಂಡಿದ್ದರು. ವಿಷ್ಣುವರ್ಧನ್ ಅವರ ಹುಟ್ಟುಹಬ್ಬ ಆಚರಣೆಗೆಂದು ಅಭಿಮಾನಿಗಳು ಬೃಹತ್ ಕೇಕ್ ತರಿಸಿದ್ದರು. ಭಾರತಿ ವಿಷ್ಣುವರ್ಧನ್ ಅದನ್ನು ಕತ್ತರಿಸಿ ಅಭಿಮಾನಿಗಳಿಗೆ ಸಿಹಿ ವಿತರಿಸಿದರು. ವಿಷ್ಣು ಭಾವಚಿತ್ರ ಇರುವ ಟಿ-ಶರ್ಟ್‌ಗಳನ್ನು ವಿತರಣೆ ಮಾಡಲಾಯಿತ