ವಿಷ್ಣುವರ್ಧನ್ ಸಮಾಧಿ ಧ್ವಂಸಕ್ಕೆ ಖಂಡನೆ: ಮೈಸೂರಿನಲ್ಲೂ ಪ್ರತಿಭಟನೆ

mysore
Published on

ಮೈಸೂರು: ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ಧ್ವಂಸ ಮಾಡಿರುವುದನ್ನು ಖಂಡಿಸಿ ವಿಷ್ಣು ಅಭಿಮಾನಿಗಳು ನಗರದಲ್ಲಿ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.

ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಇರುವ ಡಾ.ವಿಷ್ಣುವರ್ಧನ್ ಉದ್ಯಾನ ಮುಂಭಾಗದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಸಿ ಘೋಷಣೆ ಕೂಗಲಾಯಿತು.

ಎಲ್ಲರೂ ವರಮಹಾಲಕ್ಷ್ಮೀ ಹಬ್ಬವನ್ನು ಸಡಗರದಿಂದ ಆಚರಿಸುತ್ತಿದ್ದಾರೆ. ಆದರೆ, ವಿಷ್ಣು ಅಭಿಮಾನಿಗಳಿಗೆ ಇಂದು ಕರಾಳ ದಿನವಾಗಿದೆ. ವಿಷ್ಣು ಅಭಿಮಾನಿಗಳಿಗೆ ವಿಷ್ಣುವಿನ ಸಾವು ಮತ್ತೊಮ್ಮೆ ನೆನಪಾಗುತ್ತಿದೆ. ಅವರ ಸಮಾಧಿಯನ್ನು ಧ್ವಂಸ ಮಾಡಿರುವುದು ಅಭಿಮಾನಿಗಳಿಗೆ ನೋವುಂಟಾಗಿದೆ.

ಕೂಡಲೇ ಸರ್ಕಾರ ಮಧ್ಯಸ್ಥಿಕೆ ವಹಿಸಿ ಅಭಿಮಾನಿಗಳ ಸಭೆ ಕರೆದು ಇದರ ಬಗ್ಗೆ ಸ್ಪಷ್ಟೀಕರಣ ಕೊಡಬೇಕು. ಜತೆಗೆ, ಅಭಿಮಾನಿಗಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅಭಿಮಾನಿ ಬಳಗದ ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ ಆಗ್ರಹಿಸಿದರು.

ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್‌ಕುಮಾರ್, ಅಭಿಮಾನಿಗಳಾದ ಎಸ್.ಎನ್.ರಾಜೇಶ್, ವಿನಯ್‌ಕಣಗಾಲ್, ಬೈರತಿ ಲಿಂಗರಾಜು, ಲೋಕೇಶ್, ಮಹಾನ್ ಶ್ರೇಯಸ್, ಬಸವರಾಜ್ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net