ವೀರಮಾರುತಿ ದೇವಸ್ಥಾನದಲ್ಲಿ ಕಳ್ಳತನ

3hnr2 b
Published on

ಹೊನ್ನಾವರ: ತಾಲೂಕಿನ ಕಾಸರಕೋಡ ಹಿರೇಮಠದ ಶ್ರೀ ವೀರಮಾರುತಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವರ ಕೊರಳಿನಲ್ಲಿದ್ದ ಆಭರಣ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿದ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ದೇವರ ಕೊರಳಿನಲ್ಲಿದ್ದ 20 ಗ್ರಾಂ ತೂಕದ 80 ಸಾವಿರ ರೂ. ಮೌಲ್ಯದ ಬಂಗಾರದ ಸರ ಮತ್ತು ಅಂದಾಜು 7 ಸಾವಿರ ನಗದನ್ನು ಕಳ್ಳತನ ಮಾಡಲಾಗಿದೆ. ಬೆಳಗ್ಗೆ ಸ್ಥಳೀಯರು ದೇವಸ್ಥಾನಕ್ಕೆ ಬಂದು ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹೊನ್ನಾವರ ಪಿಎಸ್​ಐ ಸಾವಿತ್ರಿ ನಾಯಕ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net