ವೀರಶೈವ ಲಿಂಗಾಯತ ಧರ್ಮಕ್ಕೆ ವಿಶಿಷ್ಟವಾದ ಅಡಿಪಾಯ

1-KGLPHOTO-1
Published on

ಕೊಳ್ಳೇಗಾಲ: ಶ್ರೀ ಬಸವೇಶ್ವರರು, ಶ್ರೀ ರೇಣುಕಾಚಾರ್ಯರು, ಡಾ.ಶಿವಕುಮಾರ ಸ್ವಾಮೀಜಿ ಅವರು ವೀರಶೈವ ಲಿಂಗಾಯತ ಧರ್ಮದ ತ್ರಿಮೂರ್ತಿಗಳು ಎಂದು ಗುಂಡೇಗಾಲ ಪಟ್ಟದ ಮಠದ ಪೀಠಾಧ್ಯಕ್ಷರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಗೌರವಾಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.\

ಪಟ್ಟಣದ ಶ್ರೀ ಗುರುಮಲ್ಲೇಶ್ವರ ಕಾಂಪ್ಲೆಕ್ಸ್‌ನಲ್ಲಿ ಮಂಗಳವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜಿಸಿದ್ದ ಡಾ.ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಹಾಗೂ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ವೀರಶೈವ ಲಿಂಗಾಯತ ಧರ್ಮಕ್ಕೆ ವಿಶಿಷ್ಟವಾದ ಅಡಿಪಾಯವಿದೆ. ಆದ್ದರಿಂದ ನಾವೆಲ್ಲರೂ ನಮ್ಮ ಧರ್ಮವನ್ನು ರಕ್ಷಿಸಬೇಕು. ಕ್ರಮ ಬದ್ಧವಾಗಿ, ಶಿಸ್ತು ಬದ್ಧವಾಗಿ ಧರ್ಮ ಪಾಲನೆ ಮಾಡಬೇಕು. ನಮ್ಮನ್ನು ನೋಡಿ ಇತರರು ಅನುಸರಿಸಬೇಕು ಎಂದು ಕಿವಿ ಮಾತು ಹೇಳಿದರು.

ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರು ಮಹಾ ದೈವ ಭಕ್ತರು. ಮೊದಲು ಮಾನವನಾಗಬೇಕು. ಮಾನವ ಧರ್ಮವನ್ನು ಸಾರಬೇಕೆಂದು ಬೋಧಿಸಿದವರು. ಶ್ರೀ ರೇಣುಕಾಚಾರ್ಯರು ಹಾಗೂ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆದರ್ಶವನ್ನು ನಾವೆಲ್ಲರೂ ಪಾಲನೆ ಮಾಡಬೇಕು ಎಂದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಪುಟ್ಟಣ್ಣ ಮಾತನಾಡಿ, ಇಂದು ಸಮಾಜದ ಮಹನೀಯರ ಜಯಂತಿಯನ್ನು ಒಂದೇ ವೇದಿಕೆಯಲ್ಲಿ ಸರಳವಾಗಿ ಆಚರಣೆ ಮಾಡುತ್ತಿದ್ದೇವೆ. ಸಮಾಜದ ಮುಖಂಡರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ ಎಂದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಗೌರವಾಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಸಮಾಜದ ಮುಖಂಡರು ಸನ್ಮಾನಿಸಿದರು. ಎಲ್ಲರಿಗೂ ಪ್ರಸಾದ ವಿತರಣೆ ಮಾಡಲಾಯಿತು. ಚಾಮುಲ್ ಅಧ್ಯಕ್ಷ ನಂಜುಂಡ ಸ್ವಾಮಿ ಮಧುವನಹಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ಇಂದ್ರೇಶ್ ಮುಳ್ಳೂರು, ಮಾಜಿ ಅಧ್ಯಕ್ಷ ಮಹದೇವ ಪ್ರಸಾದ್, ಬಸವರಾಜು, ವೀರಶೈವ ಲಿಂಗಾಯತ ನೌಕರರ ಬಳಗದ ಅಧ್ಯಕ್ಷ ಮಲ್ಲೇಶಪ್ಪ, ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಸ್.ನಾಗರಾಜು ಕೊಂಗರಹಳ್ಳಿ, ಮಹದೇವಸ್ವಾಮಿ ಯುಪಿಎಸ್, ಅಕ್ಕನ ಬಳಗದ ಅಧ್ಯಕ್ಷೆ ಅರುಣಾ ಕಾರ್ತಿಕ್, ನಗರಸಭೆ ಸದಸ್ಯೆ ಸುಮಾ ಸುಬ್ಬಣ್ಣ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net